ಶಿವಮೊಗ್ಗ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ತಂತ್ರಾಂಶದ ಮೂಲಕ ಅರ್ಹ ವಿದ್ಯಾರ್ಥಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ವಿದ್ಯಾರ್ಥಿವೇತನ ಪಾವತಿಸಲಾಗುತ್ತಿದೆ.
ವಿದ್ಯಾರ್ಥಿವೇತನ ಮಂಜೂರು ಮಾಡುವ ಸಲುವಾಗಿ ಆಧಾರ್ ಜೋಡಣೆ ಆಗದೇ ಇರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಸೆ.07 ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸೆ.07 ರ ಒಳಗಾಗಿ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಶಿವಮೊಗ್ಗ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa