ಮತ ಕಳ್ಳತನ ಆರೋಪ : ಬೆಂಗಳೂರಿನ ಕಾಂಗ್ರೆಸ್ ಪ್ರತಿಭಟನೆ ಮುಂದೂಡಿಕೆ
ಬೆಂಗಳೂರು, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಲೋಕ ಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ನಡೆದಿದೆ ಆರೋಪಿಸಿ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆ ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿದ ಪ್ರತಿಭಟನೆ ಮುಂದೂಡಲಾಗಿದೆ. ಪ್ರಜಾಪ್ರ
Cong


ಬೆಂಗಳೂರು, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ನಡೆದಿದೆ ಆರೋಪಿಸಿ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಾಳೆ ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿದ ಪ್ರತಿಭಟನೆ ಮುಂದೂಡಲಾಗಿದೆ.

ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’’ ಎಂಬ ಧ್ಯೇಯದಡಿ ಹಮ್ಮಿಕೊಂಡ ಪ್ರತಿಭಟನಾ ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ ಈಗ ಅಂತಿಮ ಕ್ಷಣದಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ.ಆಗಸ್ಟ್ 5 ರ ಬದಲು ಆಗಷ್ಟ್ 8 ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್​ಗೆ ತೆರಳುತ್ತಿದ್ದಾರೆ. ಹೀಗಾಗಿ ನಾಳೆ ನಿಗದಿಯಾಗಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

ಇದೇ ವೇಳೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಭಟನಾ ಸಮಾವೇಶಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿತ್ತು ಆದರೆ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದಿಂದಾಗಿ ನಾಳೆಯ ಬದಲಾಗಿ ಆಗಸ್ಟ್​ 8ಕ್ಕೆ ಪ್ರತಿಭಟನೆ ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆದಿದ್ದವು. ಖುದ್ದು ರಣದೀಪ್ ಸುರ್ಜೇವಾಲ ಹಾಗೂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಿದ್ಧತೆಗಳನ್ನು ಮಾಡಲಾಗಿತ್ತು. ಆರಂಭದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಗೆ ಚಿಂತನೆ ನಡೆಸಲಾಗಿತ್ತು. ಆದರೆ, ನಂತರದಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ​​ ಪ್ರತಿಭಟನಾ ಸಮಾವೇಶಕ್ಕೆ ನಿರ್ಧರಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande