ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ವ್ಯಾಪಕ ಭ್ರಷ್ಠಾಚಾರ
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ವ್ಯಾಪಕ ಭ್ರಷ್ಠಾಚಾರ
ಕೋಲಾರ : ಸಂವಿದಾನ ಮತ್ತು ಕಾನೂನಿನ ಪ್ರಕಾರ ಸರ್ವರೂ ಸಮಾನರು. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಹಾಗೂ ಶೋಷಣೆಯನ್ನು ತಡೆಗಟ್ಟುವ ಸಲುವಾಗಿ ಮಹಿಳೆಯರಿಗೆ ಕಾನೂನು ಅರಿವು ಪ್ರಮುಖ್ಯ ಪಾತ್ರ ವಹಿಸುತ್ತದೆ. ಎಂದು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಮಗದ ಜಿಲ್ಲಾ ವ್ಯವಸ್ಥಾಪಕಿ ಶರೀನ್ ತಾಜ್ ಹೇಳಿದರು.


ಕೋಲಾರ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಟ್ಟಡ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡದೇ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿರುವ ಹಣವನ್ನು ವ್ಯಾಪಕ ಭ್ರಷ್ಠಾಚಾರ ಮಾಡುವ ಮೂಲಕ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ದ್ರೋಹ ಬಗೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ನ ರಾಜ್ಯ ಖಜಾಂಚಿ ಎನ್.ಲಿಂಗರಾಜ್ ಆಕ್ರೋಷ ವ್ಯಕ್ತಪಡಿಸಿದರು.

ಕೋಲಾರದಲ್ಲಿ ನಡೆದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ನ ಕೋಲಾರ ಜಿಲ್ಲಾ ೫ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಆಭದ್ರತೆಯಲ್ಲಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿದ್ದು, ಇವರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಕಲ್ಯಾಣ ಮಂಡಳಿಗಳನ್ನು ರಚಿಸಲಾಯಿತು.

ರಾಜ್ಯದಲ್ಲಿ ಕಾರ್ಮಿಕರಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಕಾರ್ಮಿಕರಿಗೆ ಯಾವುದೇ ಅನುಕೂಲವಾಗದ ವಿವಿಧ ಕಿಟ್ಗಳ ವಿತರಣೆ, ಆರೋಗ್ಯ ಶಿಬಿರಗಳು, ವಸತಿ ಶಾಲೆ, ಅಂಬ್ಯೂಲೆನ್ಸ್ ಮತ್ತಿತರ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇವುಗಳು ಬಹುತೇಕ ಕಳಪೆ ಗುಣಮಟ್ಟದಿಂದ ಕೂಡಿದ್ದು, ಕಾರ್ಮಿಕರಿಗೆ ಯಾವುದೇ ಪ್ರಯೋಜನವಿಲ್ಲ. ಕಲ್ಯಾಣ ಮಂಡಳಿಯ ಕಾಯ್ದೆಯಲ್ಲಿ ವಸ್ತು ರೂಪದಲ್ಲಿ ವಿತರಣೆ ಮಾಡದೇ ಫಲಾನುಭವಿಗಳ ಖಾತೆಗೆ ನೇರ ಪಾವತಿ ಮಾಡುವಂತೆ ಸ್ಪಷ್ಠವಾಗಿ ತಿಳಿಸಿದ್ದರೂ, ಈ ನಿಯಮಗಳಿಗೆ ಉಲ್ಲಂಘಟಿಸಿ ಸಾವಿರಾರು ಕೋಟಿ ರೂ. ಹಣವನ್ನ ವ್ಯರ್ಥವಾಗಿ ಖರ್ಚು ಮಾಡಲಾಗುತ್ತಿದೆ. ಈ ಕುರಿತು ಕಾರ್ಮಿಕರು ಸಂಘಟಿತರಾಗಿ ನಿರಂತರವಾದ ಹೋರಾಟಗಳನ್ನು ನಡೆಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ನ ಕೋಲಾರ ಜಿಲ್ಲಾ ಅಧ್ಯಕ್ಷರಾದ ಪಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪಾತಕೋಟೆ ನವೀನ್ಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ಕೆ.ಮಂಜುನಾಥ್, ಎಸ್.ಆಶಾ, ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಎಂ.ಭೀಮರಾಜ್ ಸ್ವಾಗತಿಸಿದರು.

ಸಮ್ಮೇಳನದ ಕೊನೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪಿ.ಶ್ರೀನಿವಾಸ್, ಕಾರ್ಯಾಧ್ಯಕ್ಷರಾಗಿ ಕೆ.ಮಂಜುನಾಥ್, ಕಾರ್ಯದರ್ಶಿ ಎಂ.ಭೀಮರಾಜ್, ಖಜಾಂಚಿ ಎಸ್.ಆಶಾ, ಉಪಾಧ್ಯಕ್ಷರಾಗಿ ಹೆಚ್ ರಮೇಶ್, ರಾಮಚಂದ್ರಪ್ಪ, ಪೆರುಮಾಳಪ್ಪ, ಸತೀಶ್ ಕುಮಾರ್ ಸಹ ಕಾರ್ಯದರ್ಶಿಯಾಗಿ ಎಂ ವಿಜಯಕೃಷ್ಣ, ಬಿ.ಹೆಚ್. ವಿಶ್ವನಾಥ್, ನಾರಾಯಣಸ್ವಾಮಿ ಆಯ್ಕೆಯಾದರು.

ಚಿತ್ರ : ಕೋಲಾರದಲ್ಲಿ ನಡೆದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ನ ಕೋಲಾರ ಜಿಲ್ಲಾ ೫ನೇ ಸಮ್ಮೇಳನವನ್ನು ಕಾರ್ಮಿಕರ ಫೆಡರೇಷನ್ನ ರಾಜ್ಯ ಖಜಾಂಚಿ ಎನ್.ಲಿಂಗರಾಜ್ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande