ನವದೆಹಲಿ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭ್ರಷ್ಟಾಚಾರದ ವಿರುದ್ಧ ಮಹತ್ವದ ಕ್ರಮವಾಗಿ, ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವಿಜಯ್ ಸಿಂಗ್ ಅವರನ್ನು ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧಿಸಿದೆ.
ಉತ್ತರ ದೆಹಲಿಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯ್ ಸಿಂಗ್, ತನ್ನ ಸೋದರ ಸಂಬಂಧಿಯನ್ನು ಬಂಧಿಸದಿರುವುದು ಹಾಗೂ ಜಾಮೀನು ವ್ಯವಸ್ಥೆ ಮಾಡಿಕೊಡುವುದಕ್ಕಾಗಿ ಒಬ್ಬ ವ್ಯಕ್ತಿಯಿಂದ ₹50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ. ಈ ಕುರಿತು ಬಂದ ದೂರಿನ ಮೇರೆಗೆ ಸಿಬಿಐ ಆಗಸ್ಟ್ 5 ರಂದು ಪ್ರಕರಣ ದಾಖಲಿಸಿಕೊಂಡು ಬಲೆ ಬೀಸಿತ್ತು.
ಅದೇ ದಿನ, ವಿಜಯ್ ಸಿಂಗ್ ಅವರು ₹40,000 ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa