ಬೆಂಗಳೂರು, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಲಿದೆ. ತೋಟಗಾರಿಕಾ ಇಲಾಖೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ವೀರಗಾಥೆ ಇವುಗಳ ಆಧಾರದ ಮೇಲೆ ಪುಷ್ಪ ಕಲಾಕೃತಿಗಳನ್ನು ತಯಾರಿಸಲಾಗಿದೆ. ಕೋಟೆಯ ವಿನ್ಯಾಸದ ವರ್ಟಿಕಲ್ ಗಾರ್ಡನ್, ರಾಣಿ-ರಾಯಣ್ಣ ಪ್ರತಿಮೆಗಳು, ಹುತಾತ್ಮ ಸನ್ನಿವೇಶಗಳ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ.
109 ಬಗೆಯ ಹೂವಿನ 30 ಲಕ್ಷಕ್ಕೂ ಹೆಚ್ಚು ಹೂಗಳನ್ನು ಬಳಸಿ ಈ ಕಲಾಕೃತಿಗಳನ್ನು ರಚಿಸಲಾಗಿದ್ದು, 12 ದಿನಗಳ ಕಾಲ ಪ್ರದರ್ಶನ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa