ಬೆಂಗಳೂರು, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ಆರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಿಂಚು-ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸಲಹೆ ನೀಡಲಾಗಿದೆ.
ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa