ನವದೆಹಲಿ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದೆ.
ಜುಲೈ 22 ರಂದು, ಜಗದೀಪ್ ಧಂಖರ್ ಅವರು ಆರೋಗ್ಯ ಕಾರಣಗಳಿಂದ ಹಠಾತ್ತನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು, ನಂತರ ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಗಳು ಜೋರಾಗಿದ್ದವು.
ಉಪ ರಾಷ್ಟ್ರಪತಿ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಹೊರಡಿಸಲಾಗಿದ್ದು. ಆಗಸ್ಟ್ 21 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ಆಗಸ್ಟ್ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆಗಸ್ಟ್ 25 ರವರೆಗೆ ನಾಮಪತ್ರಗಳನ್ನು ಹಿಂಪಡೆಯಬಹುದು.
ಈ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ, ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ರಾಜ್ಯ ಸಭೆಯ 233 ಸದಸ್ಯರು, ರಾಜ್ಯ ಸಭೆಯ 12 ನಾಮನಿರ್ದೇಶಿತ ಸದಸ್ಯರು ಮತ್ತು ಲೋಕ ಸಭೆಯ 543 ಸದಸ್ಯರು ಮತ ಚಲಾಯಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa