ಸರ್ಕಾರಗಳ ಎಲ್ಲಾ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಎಲ್ಲ ಇಲಾಖೆಗಳ ಕರ್ತವ್ಯ
ಸರ್ಕಾರಗಳ ಎಲ್ಲಾ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಎಲ್ಲಾ ಇಲಾಖೆಗಳ ಕರ್ತವ್ಯ
ಚಿತ್ರ : ಕೆಜಿಎಫ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋಧಕುಮಾರ್ ಉದ್ಘಾಟಿಸಿದರು.


ಕೋಲಾರ,೧ಸೆಪ್ಟೆಂಬರ್ (ಹಿ,ಸ,) :

ಆ್ಯಂಕರ್ : ಸರ್ಕಾರಗಳ ಎಲ್ಲಾ ಯೊಜನೆಗಳು ಪರಿಣಾಮಕಾರಿ ಅನುಷ್ಠಾನವು ಸಂಬಂಧಿಸಿದ ಇಲಾಖೆಗೆ ಮಾತ್ರ ಸೀಮಿತವಲ್ಲ ಪ್ರತಿಯೊಂದು ಇಲಾಖೆಯ ಜವಾಬ್ದಾರಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋಧಕುಮಾರ್ ಅಭಿಪ್ರಾಯಪಟ್ಟರು.

ಕೆಜಿಎಫ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಪೌಷ್ಠಿಕತೆಯಿಂದಾಗಿ ಅನಾರೋಗ್ಯದ ಸಮಸ್ಯೆಗಳು ಎದುರಾಗಿ ವಯಸ್ಸು ಹಾಗೂ ಲಿಂಗ ಭೇದವಿಲ್ಲದೆ ಎಲ್ಲರೂ ಸಂಕಷ್ಟಕ್ಕೆ ಒಳಗಾಗುತ್ತಾರೆ. ಗರ್ಭಿಣಿಯರ ಪೌಷ್ಠಿಕ ಮಟ್ಟದ ಆಧಾರದ ಮೆಲೆ ಆಕೆಗೆ ಹುಟ್ಟುವ ಮಗುವಿನ ಆರೋಗ್ಯ ನಿರ್ಧಾರವಾಗುತ್ತದೆ. ರಕ್ತ ಹೀನತೆಯು ಗರ್ಭಿಣಿ ಬಾಣಂತಿ ಸಾಮಾನ್ಯ ಸಮಸ್ಯೆಯಾಗಲಿದೆ ಆದ್ದರಿಂದ ಗರ್ಭಿಣಿ ಹೆಣ್ಣು ಮಕ್ಕಳು ಸಮತೋಲನ ಆಹಾರ ಸೇವಿಸುವುದರಿಂದ ಮಾತ್ರ ಪರಿಣಾಮಕಾರಿಯಾಗಿ ರಕ್ತಹೀನತೆ ತಡೆಗಟ್ಟಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ,ಸಿವಿಲ್ ನ್ಯಾಯಾಧೀಶೆ ಶೇಮಿದ, ಡಾ:ಸುರೇಶ್ಕುಮಾರ್,ವಕಿಲರ ಸಂಘದ ಅಧ್ಯಕ್ಷ ರಾಜಗೋಪಾಲಗೌಡ ,ಮಣಿವಣ್ಣನ್,ನಗರಸಭೆ ಪೌರಾಯುಕ್ತ ಅಂಜನೇಯಲು ಸಿಡಿಪಿಒ ರಾಜೇಶ್ ಹಾಗೂ ಇತರರು ಹಾಜರಿದ್ದರು.

ಚಿತ್ರ : ಕೆಜಿಎಫ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋಧಕುಮಾರ್ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande