ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತವು ಹಸಿರು ಇಂಧನ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ದೇಶದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವು 250 ಗಿಗಾವ್ಯಾಟ್‌ಗೆ ತಲುಪಿದ್ದು, ಇದು ಶುದ್ಧ ಇಂಧನ ಕ್ರಾಂತಿಯಲ್ಲಿ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.
ಸೌರಶಕ್ತಿ, ಪವನಶಕ್ತಿ, ಜಲವಿದ್ಯುತ್ ಹಾಗೂ ಜೈವಿಕ ಇಂಧನದ ಸಮಗ್ರ ಬಳಕೆಯಿಂದ ಈ ಸಾಧನೆ ಸಾಧ್ಯವಾಗಿದೆ. ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಈ ಸಾಧನೆಯನ್ನು ಶ್ಲಾಘಿಸಿ, “ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ಹಸಿರು ಇಂಧನ ನಾಯಕತ್ವವನ್ನು ಮತ್ತಷ್ಟು ಬಲಪಡಿಸಿದೆ” ಎಂದು ಹೇಳಿದ್ದಾರೆ.
2014ರಲ್ಲಿ ದೇಶದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಕೇವಲ 81 ಗಿಗಾವ್ಯಾಟ್ ಇದ್ದು, 2025ರಲ್ಲಿ ಅದು 250 ಗಿಗಾವ್ಯಾಟ್‌ಗೆ ಏರಿದೆ. 2030ರೊಳಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸಾಧಿಸುವ ಗುರಿಯನ್ನು ಭಾರತ ಸರ್ಕಾರ ಹೊಂದಿದೆ.
ಈ ಸಾಧನೆಯಿಂದ ಭಾರತವು ಶುದ್ಧ ಮತ್ತು ಸುಸ್ಥಿರ ಭವಿಷ್ಯದತ್ತ ದೃಢ ಹೆಜ್ಜೆಯನ್ನಿಟ್ಟಿದ್ದು, ಜಾಗತಿಕ ವೇದಿಕೆಯಲ್ಲಿ ಶುದ್ಧ ಇಂಧನ ಕ್ಷೇತ್ರದ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa