ಕಾರವಾರ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಎರಡು ದಿನ ಇಡಿ ವಶಕ್ಕೆ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕರ್ನಾಟಕದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ವಶಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಮಧ್ಯಂ
Satish


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕರ್ನಾಟಕದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ವಶಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ವಶಕ್ಕೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ವಶಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಸೈಲ್ ಅವರನ್ನು ಮಂಗಳವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande