ಆರೋಗ್ಯ ಇಲಾಖೆ : ಶುಶ್ರೂಷಕಿ, ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಅಹ್ವಾನ
ಹೊಸಪೇಟೆ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಮತ್ತು ದರ್ತಿ ಅಭಾ ಜನ ಜಾತಿ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು
ಆರೋಗ್ಯ ಇಲಾಖೆ : ಶುಶ್ರೂಷಕಿ, ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಅಹ್ವಾನ


ಹೊಸಪೇಟೆ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಮತ್ತು ದರ್ತಿ ಅಭಾ ಜನ ಜಾತಿ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನಗೊಳಿಸಲು ನೇರ ಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸಲು ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.

ಶುಶ್ರೂಷಕರ 04 ಹುದ್ದೆಗಳು : ಪರಿಶಿಷ್ಟ ಜಾತಿ(ಪ್ರ-ಎ) 1, ಸಾಮಾನ್ಯ ಅಭ್ಯರ್ಥಿ 1, ಸಾಮಾನ್ಯ ಅಭ್ಯರ್ಥಿ ಮಹಿಳೆ 1, ಪರಿಶಿಷ್ಟ ಪಂಗಡ 1 ಮೀಸಲಾತಿ ಇದ್ದು, ವಿದ್ಯಾರ್ಹತೆ ಜಿಎನ್‌ಎಂ ನರ್ಸಿಂಗ್, ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್‌ನಲ್ಲಿ ನೋಂದಾಣಿಯಾಗಿರಬೇಕು. ಕನಿಷ್ಟ ಎರಡು ವರ್ಷಗಳ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿರಬೇಕು. ವಯೋಮಿತಿ ಗರಿಷ್ಟ 45 ವರ್ಷ ಮೀರಿರಬಾರದು.

ಪ್ರಯೋಗ ಶಾಲಾ ತಂತ್ರಜ್ಞರ 04 ಹುದ್ದೆಗಳು : ಪರಿಶಿಷ್ಟ ಜಾತಿ(ಪ್ರ-ಎ) 1, ಸಾಮಾನ್ಯ ಅಭ್ಯರ್ಥಿ 1, ಸಾಮಾನ್ಯ ಅಭ್ಯರ್ಥಿ ಮಹಿಳೆ 1, ಪರಿಶಿಷ್ಟ ಪಂಗಡ 1 ಮೀಸಲಾತಿ ಇದ್ದು, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು ಮತ್ತು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗ ಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಡಿಪ್ಲೋಮಾ ಕೊರ್ಸ್ ಅಥವಾ ದ್ವಿತೀಯ ಪಿಯುಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ಮತ್ತು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗ ಶಾಲಾ ತಂತ್ರಜ್ಞತೆಯಲ್ಲಿ ಎರಡು ವರ್ಷದ ಡಿಪ್ಲೋಮ ಹೊಂದಿರಬೇಕು. ಕಡ್ಡಾಯವಾಗಿ ಪ್ರಯೋಗ ಶಾಲಾ ತಂತ್ರಜ್ಞರು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯಲ್ಲಿ ನೋಂದಾಣಿಯಾಗಿರಬೇಕು. ಕನಿಷ್ಟ ಎರಡು ವರ್ಷಗಳ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿರಬೇಕು. ವಯೋಮಿತಿ ಗರಿಷ್ಟ 45 ವರ್ಷ ಮೀರಿರಬಾರದು.

ಅರ್ಜಿಗಳನ್ನು ಸೆ.11 ರಿಂದ ಸೆ.18 ರ ಸಂಜೆ. 5:30 ರವರೆಗೆ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸೂಚಿಸಿದ ಕೊನೆಯ ದಿನಾಂಕದೊಳಗೆ ಕಚೇರಿಗೆ ನೇರವಾಗಿ ಅಥವಾ ಕಚೇರಿಯ ಇಮೇಲ್ dtovijayanagara@gmail.com ಸೆ.18 ರಂದು ಸಂಜೆ 5:30 ರೊಳಗೆ ರವಾನಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಾರ್ಯಾಲಯ, 60 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣ, ಹೊಸಪೇಟೆ, ವಿಜಯನಗರ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande