ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲು
ಮಂಡ್ಯ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರಿನಲ್ಲಿ ಗ
Ct ravi


ಮಂಡ್ಯ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದ ಹಿನ್ನಲೆಯಲ್ಲಿ ಸೆಪ್ಟೆಂಬರ್ 10ರಂದು ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರು ವೇದಿಕೆಯಲ್ಲಿ ಭಾಷಣ ಮಾಡಿದ್ದರು.

ಮದ್ದೂರು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆರೋಪದಲ್ಲಿ ಸಿ.ಟಿ. ರವಿ ಅವರು ಹಿಂದೂ ಸಮಾಜವನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿ, ಇತರ ಸಮುದಾಯದವರ ವಿರುದ್ಧ ವೈರತ್ವದ ಭಾವನೆ ಮೂಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande