ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ
ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ
ಚಿತ್ರ : ಕೋಲಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿದರು.


ಕೋಲಾರ, ೧೧ ಸೆಪ್ಟೆಂಬರ್ (ಹಿ.ಸ.)ಆಂಕರ್ :

ಆ್ಯಂಕರ್ : ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳನ್ನು ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿ ಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.

ಕೋಲಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ೧೫ರಂದು ನಡೆಯಲಿರುವ ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಚಿತ್ರಕಲೆ, ಛಾಯಾಚಿತ್ರ, ಭಾಷಣ ಸ್ಪರ್ಧೆ, ಸೈಕಲ್ ರ್ಯಾಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲಾ ಸ್ಪರ್ಧೆಗಳ ಯಶಸ್ಸಿಗೆ ಅಧಿಕಾರಿಗಳು ಸಮನ್ವಯ ದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ನನ್ನ ಮತ ನನ್ನ ಹಕ್ಕು, ಗಾಂಧಿ ಭಾರತ ಹಾಗೂ ಸಂವಿಧಾನ ಪೀಠಿಕೆ ಎಂಬ ಶೀರ್ಷಿಕೆಯಡಿ ಶಿಕ್ಷಣ ಇಲಾಖೆಯ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ೬,೭ ಮತ್ತು ೮ ನೇ ತರಗತಿ ಹಾಗೂ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಲಾಗುತ್ತಿದ್ದು, ಆಯ್ಕೆಯಾದ ಅರ್ಹ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಪದವಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಅತ್ಯುತ್ತಮ ಮೂವರು ವಿದ್ಯಾರ್ಥಿಗಳಿಗೆ ನವೆಂಬರ್ ೨೬ ರ ಸಂವಿಧಾನ ದಿನಾಚರಣೆಯಂದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಸೆಪ್ಟೆಂಬರ್ ೧೫ ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ನಡೆಯಲಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಮುಂಜಾನೆ ೭ಕ್ಕೆ ಸೈಕಲ್ ರ್ಯಾಲಿಗೆ ಚಾಲನೆ ನೀಡಲಾಗುವುದು ಎಂದರು.

ಅಂದು ಬೆಂಗಳೂರಿನಲ್ಲಿ ನಡೆಯುವ ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ೧೦ ಅನುಭವಿ ಬೈಕ್ ರೈಡರ್ಗಳು ಭಾಗವಹಿಸಲು ಅವಕಾಶವಿದ್ದು, ಅನುಭವಿ ಬೈಕ್ ರೈಡರ್ಗಳ ಮಾಹಿತಿ ನೀಡುವುದರೊಂದಿಗೆ ಒಂದು ದಿನ ಮುಂಚಿತವಾಗಿ ಹೊರಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಕ್ರೀಡಾ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್,ಸಹಾಯಕ ಆಯುಕ್ತೆ ಡಾ. ಮೈತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande