ತಿಲಕ್ ಸಂಘಟಿಸಿದ ಸಾರ್ವಜನಿಕ ಗಣೇಶೋತ್ಸವಕ್ಕೆ ಅಡ್ಡಿ ; ರಾಜ್ಯಪಾಲರಿಗೆ ದೂರು
ತಿಲಕ್ ಸಂಘಟಿಸಿದ ಸಾರ್ವಜನಿಕ ಗಣೇಶೋತ್ಸವಕ್ಕೆ ಅಡ್ಡಿ ; ರಾಜ್ಯಪಾಲರಿಗೆ ದೂರು
ಚಿತ್ರ : ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅಡ್ಡಿ ಹಾಗೂ ವಿಹಿಂಪ ಸಹ ಕಾರ್ಯದರ್ಶಿ ಶರಣ್ಪಂಪ್ವೆಲ್ ಅವರು ಉತ್ಸವದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ವಿಶ್ವಹಿಂದೂಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕೋಲಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು


ಕೋಲಾರ, ೧೧ ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ದ ಹೋರಾಡಲು ದೇಶಭಕ್ತರನ್ನು ಸಂಘಟಿಸಿದ ಹಾಗೂ ಹಿಂದೂಗಳ ಆಧ್ಯಾತ್ಮಿಕ ಹಿನ್ನಲೆ ಇರುವ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅಡ್ಡಿ ಹಾಗೂ ವಿಹಿಂಪ ಸಹ ಕಾರ್ಯದರ್ಶಿ ಶರಣ್ಪಂಪ್ವೆಲ್ ಅವರು ಉತ್ಸವದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ವಿಹಿಂಪ,ಬಜರಂಗದಳ ಮುಖಂಡರು, ದೇಶದ ಸ್ವಾತಂತ್ರ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕ್ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಕಾರಣರಾಗಿದ್ದು, ಅಂದಿನಿಂದ ಇಂದಿನವರೆಗೂ ಉತ್ಸವ ಸಾರ್ವಜನಿಕ ಸ್ಥಳಗಳಲ್ಲಿ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.

ಆದರೆ ಈ ಬಾರಿ ಪ್ರತಿ ಹಂತದಲ್ಲೂ ಗಣೇಶೋತ್ಸವಕ್ಕೆ ಅಡ್ಡಿಪಡಿಸಿದ ರಾಜ್ಯದ ಕಾಂಗ್ರೆಸ್ ಸರ್ಕಾರ, ವಿಘ್ನನಿವಾರಕನ ಉತ್ಸವಕ್ಕೆ ಅನೇಕ ವಿಘ್ನಗಳನ್ನು ತಂದೊಡ್ಡಿದೆ, ಅನಗತ್ಯ ನಿಯಮಗಳನ್ನು ಜಾರಿ ಮಾಡಿ ಗಣೇಶೋತ್ಸವ ತಡೆಯಲು ಪ್ರಯತ್ನ ಹೇರಿದ್ದು, ತನ್ನ ನಿಯಮಗಳನ್ನು ಗಣೇಶ ಭಕ್ತರ ಮೇಲೆ ಹೇರಿದೆ ಎಂದು ದೂರಿದರು.

ಕೆಲವು ಕಡೆ ಧ್ವನಿವರ್ಧಕ ಬಳಸಲು ನಿಷೇಧ ಹೇರಿದೆ, ನಮ್ಮ ರಾಜ್ಯದ ಮದ್ದೂರು, ಸಾಗರ ಸೇರಿದಂತೆ ಹಲವು ಸ್ಥಳಗಳಲ್ಲಿ ಗಣೇಶ ಶೋಭಾಯಾತ್ರೆ ಮತ್ತು ವಿಸರ್ಜನಾ ಮೆರವಣಿಗೆಯ ಮೇಲೆ ಅಲ್ಪಸಂಖ್ಯಾತರೆಂಬ ಹಣೆಪಟ್ಟಿ ಹೊತ್ತಿರುವ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆಯುತ್ತಿದೆ. ಇದರ ವಿರುದ್ದ ರಾಜ್ಯದ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಳ್ಳಲು ವಿಫಲರಾಗಿದ್ದು, ಹಿಂದುಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ವಿಶ್ವಹಿಂದೂಪರಿಷತ್ ಮುಖಂಡರ ಮೇಲೆ ವಿಧಿಸಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂಪಡೆಯಬೇಕು,ಗಣೇಶ ಶೋಭಾಯಾತ್ರೆ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಕಲ್ಲು ತೂರಾಟ ನಡೆಸಿದ ಕಡೆಗಳಲ್ಲಿ ಡ್ರೋಣ್ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಜರಂಗದಳ,ವಿಹಿಂಪ ಮುಖಂಡರಾದ ಬಾಲಾಜಿ, ಬಾಬು, ಮುಂಜುನಾಥ್ ಮುದ್ದಪ್ಪ, ಜಿಲ್ಲಾ ಸಂಚಾಲಕ ಆರ್.ವಿಶ್ವನಾಥ್, ಗ್ರಾಮಾಂತರ ಸಂಚಾಲಕ ಶ್ರೀಧರ್, ನಗರ ಘಟಕದ ವಿಶ್ವನಾಥ್, ಮುಳಬಾಗಿಲು ವಿಶ್ವ, ಮಣಿ, ಬಂಗಾರಪೇಟೆ ವಿಶ್ವ, ಭವಾನಿ, ವಿನಯ್, ಕಾಶಿ, ಗೋವಿಂದ, ಲಡ್ಡು, ಸಾಯಿಮೌಳಿ, ಮಂಜು, ಮಹೇಶ್, ಅಡಿಕೆ ನಾಗ, ಓಂಪ್ರಕಾಶ್ ಇದ್ದರು.

ಚಿತ್ರ : ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅಡ್ಡಿ ಹಾಗೂ ವಿಹಿಂಪ ಸಹ ಕಾರ್ಯದರ್ಶಿ ಶರಣ್ಪಂಪ್ವೆಲ್ ಅವರು ಉತ್ಸವದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ವಿಶ್ವಹಿಂದೂಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕೋಲಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande