ಮಂಡ್ಯ, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗಣೇಶ ಮೆರವಣಿಗೆಯ ವೇಳೆ ನಡೆದಿದ್ದ ಕಲ್ಲು ತೂರಾಟದ ಘಟನೆಯ ನಂತರ, ಗುರುವಾರ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಅವರ ಭಾಷಣವು ಪ್ರಚೋದನಕಾರಿ ಸ್ವರೂಪದ್ದಾಗಿದೆ ಎಂದು ಆರೋಪಿಸಲಾಗಿದೆ.
ಮದ್ದೂರು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರು ಆಧಾರವಾಗಿ ಪ್ರಕರಣ ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 196(1)(ಚಿ), 299, 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಯತ್ನಾಳ್ ಅವರು ಅನ್ಯಕೋಮಿಗೆ ಧಕ್ಕೆ ತರುವ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ರೀತಿಯ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa