ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರು ಸಮೀಕ್ಷೆಗೆ ಸದ್ಯ 420 ಕೋಟಿ ವೆಚ್ಚವಾಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಈ ಗಣತಿ ಮುಖ್ಯವಾಗಿದ್ದು, ಎಲ್ಲಾ ನಾಗರಿಕರೂ ಪಾಲ್ಗೊಳ್ಳಬೇಕು, ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು. ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ವೈರುಧ್ಯ, ಅಸಮಾನತೆ ಇದೆ. ಆದರೆ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಾಮಾಜಿಕ ನ್ಯಾಯ ಕೊಡಬೇಕು ಎಂದು ಹೇಳುತ್ತದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆ ಇದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಪ್ರಜಾಪ್ರಭುತ್ವ ಉಳಿಯಬೇಕಾದ್ರೆ ಅಸಮಾನತೆ ಹೋಗಲಾಡಿಸಬೇಕು. ಅಸಮಾನತೆ ಇದ್ದರೆ ಅದರಿಂದ ನರಳುವ ಜನರು ಪ್ರಜಾಪ್ರಭುತ್ವದ ಸೌಧ ಧ್ವಂಸ ಮಾಡುತ್ತಾರೆ ಎಂದರು. ಸಮಾಜದಲ್ಲಿ ಅಸಮಾನತೆ ಉಳಿಯಲು ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಸದ್ಯ 7 ಕೋಟಿ ಜನಸಂಖ್ಯೆ ಇದೆ. ಸುಮಾರು 2 ಕೋಟಿ ಕುಟುಂಬಗಳು ಇವೆ. ಇವರಿಗೆ ಸಮಾನ ಅವಕಾಶ ಒದಗಿಸಬೇಕು. ಸಮಾನತೆ ಸಮವಾಗಿ ಕೊಡಬೇಕು. ಅದನ್ನೇ ಸಂವಿಧಾನ ಹೇಳಿರುವುದು. ಸಮಾನತೆ, ಸಮಾನ ಅವಕಾಶ ಒದಗಿಸೋದು ನಮ್ಮ ಕರ್ತವ್ಯ ಹೀಗಾಗಿ 2015 ರಲ್ಲೇ ಸಮೀಕ್ಷೆ ಮಾಡಿಸಲಾಗಿತ್ತು ಎಂದರು. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿತ್ತು ಕಾಂತರಾಜು ನೇತೃತ್ವದಲ್ಲಿ ಸರ್ವೆ ನಡೆದಿತ್ತು, ಶಿಕ್ಷಣ, ಉದ್ಯೋಗ, ಜಾತಿ, ಧರ್ಮ ತಿಳಿಯಲು ಸಮೀಕ್ಷೆ ಮಾಡಿಸಲಾಗಿತ್ತು. ಅವರ ಮಾಹಿತಿ ಗೊತ್ತಾದರೆ ಅವರಿಗೆ ಯೋಜನೆ ಕೊಡಲು ಅನುಕೂಲ ಆಗುತ್ತದೆ ಎನ್ನುವುದ ಇದರ ಹಿಂದಿನ ಉದ್ದೇಶವಾಗಿತ್ತು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಮೂಲಕ ಅಸಮಾನತೆ ಕಡಿಮೆ ಮಾಡುವ ಪ್ರಯತ್ನ ಮಾಡಿದ್ದೇವೆ. ಭಾಗ್ಯಗಳ ಮೂಲಕ ಸಮಾನತೆ ಕೊಡೋ ಕೆಲಸ ಮಾಡಲಾಗುತ್ತಿದೆ. ಇದರ ಹೊರತಾಗಿಯೂ ಅವಕಾಶ ವಂಚಿತರಿಗೆ ಅವಕಾಶ ಕೊಡಲು ಅವರ ಬಗ್ಗೆ ಮಾಹಿತಿ ಇರಬೇಕು. ವಿಶೇಷ ಕಾರ್ಯಕ್ರಮ ಕೊಡಲು ದತ್ತಾಂಶಗಳು ನಮಗೆ ಗೊತ್ತಾಗಬೇಕು. ಅಮೆರಿಕದಲ್ಲಿ ಕರಿಯರಿಗೆ ಮೀಸಲಾತಿ ಇದೆ. ನಾವು ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಹೀಗಾಗಿ ದತ್ತಾಂಶದ ಅವಶ್ಯಕತೆ ಇದೆ ಎಂದು ಹೇಳಿದರು.
2015ರಲ್ಲಿ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ನಡೆಸಲಾಗಿತ್ತು, ಆದರೆ ವರದಿ 10 ವರ್ಷ ಮೀರಿದೆ, ಹಾಗಾಗಿ ಕಾಂತರಾಜು ವರದಿಯನ್ನ ತಿರಸ್ಕಾರ ಮಾಡಲಾಗಿದೆ. ಈಗ ಹೊಸದಾಗಿ ಸಮೀಕ್ಷೆ ಮಾಡಿಸಲಾಗುದು. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಸಮೀಕ್ಷೆ ನಡೆಯಲಿದೆ. 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ಮಾಡಿಸಲಾಗುವುದು. ಮಧುಸೂದನ್ ನಾಯಕ್ ನೇತೃತ್ವದ ಆಯೋಗದಿಂದ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಮೀಕ್ಷೆ ಕಾರ್ಯಕ್ಕೆ 1.75 ಲಕ್ಷ ಶಿಕ್ಷಕರ ಬಳಕೆ ಮಾಡಲಾಗುತ್ತಿದ್ದು, ಈ ಅವಧಿಯಲ್ಲಿ ದಸರಾ ರಜೆ ಇದೆ ಹಾಗಾಗಿ ಶಿಕ್ಷಕರನ್ನ ಸರ್ವೇ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲಾಗುವುದು. ಸಮೀಕ್ಷೆಯಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಕರಿಗೆ ವಿಶೇಷ ಗೌರವ ಧನ ಕೊಡ್ತೀವಿ. ಪ್ರತಿಯೊಬ್ಬರಿಗೆ 20 ಸಾವಿರ ಗೌರವ ಧನ ಸಿಗಲಿದೆ. ಇದಕ್ಕಾಗಿ 325 ಕೋಟಿ ಖರ್ಚು ಆಗಲಿದೆ. ಜೊತೆಗೆ ಮರು ಸಮೀಕ್ಷೆಗೆ 420 ಕೋಟಿ ಹಣ ನೀಡಲಾಗುವುದು ಅಗ್ಯವಿದ್ದರೆ ಹೆಚ್ಚಿನ ಹಣ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮಧುಸೂದನ್ ನಾಯಕ್ ಸಮಿತಿ ವೈಜ್ಞಾನಿಕ ಸರ್ವೆ ಮಾಡಬೇಕು ಮತ್ತು ವರದಿಯನ್ನ ಡಿಸೆಂಬರ್ ಒಳಗೆ ಸಲ್ಲಿಸಲು ಸೂಚಿಸಲಾಗಿದೆ ಎಂದ ತಿಳಿಸಿದ್ದು, ಈ ಬಾರಿ ವಿನೂತನ ಸರ್ವೇ ಪದ್ದತಿಯಂತೆ . ಮೀಟರ್ ರೀಡರ್‌ಗಳು, ಆರ್‌ಆರ್ ನಂಬರ್, ಜಿಯೊ ಟ್ಯಾಗ್ ಮಾಡಿ ಮನೆ ಮನೆಗೆ ಪಟ್ಟಿ ಮಾಡಿ ಸಂಖ್ಯೆ ನೀಡುತ್ತಾರೆ . ಯುಎಚ್ಐ ನಂಬರ್ ಮೀಟರ್ ರೀಡರ್ ನೀಡುತ್ತಾರೆ. 2 ಕೋಟಿ ಮನೆಗೂ ಸ್ಟಿಕ್ಕರ್ ಅಂಟಿಸುವ ಕೆಲಸ ಮಾಡುತ್ತಾರೆ. ಇದುವರೆಗೂ 55 ಕೋಟಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದ್ದಾರೆ. ಇದಾದ ಮೇಲೆ ಮನೆ ಮನೆಗೆ ಶಿಕ್ಷಕರು ಸರ್ವೆ ಮಾಡುತ್ತಾರೆ. ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡುತ್ತಾರೆ. ಮೊಬೈಲ್ ಇಲ್ಲದೇ ಹೋದ ಆ ಮನೆಗಳ ಸರ್ವೆ ಮಾಡಲಾಗುವುದು. ಎಲ್ಲರು ಈ ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಈ ಸರ್ವೆಯಲ್ಲಿ 60 ಪ್ರಶ್ನೆ ಕೇಳಲಾಗುವುದು. ಜಾತಿ, ಧರ್ಮ, ಉದ್ಯೋಗ, ಶಿಕ್ಷಣ, ಸೇರಿ ಕುಟುಂಬದ ಸಂಪೂರ್ಣ ಮಾಹಿತಿ ಇರುವ 60 ಪ್ರಶ್ನೆ ಕೇಳುತ್ತಾರೆ ಎಲ್ಲರು ಇದರಲ್ಲಿ ಭಾಗಿಯಾಗಬೇಕು. ಪ್ರತಿಯೊಬ್ಬರೂ 60 ಪ್ರಶ್ನೆಗೆ ಉತ್ತರ ಕೊಡಬೇಕು. ಯಾರೂ ಸಮೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa