ಪಾಟ್ನಾ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮುಂಬರುವ ಬಿಹಾರ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬಿಹಾರಕ್ಕೆ ಆಗಮಿಸಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಾಟ್ನಾದಲ್ಲಿ ನಡ್ಡಾ ಅವರು, ದೈನಿಕ್ ಪತ್ರಿಕೆಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಬಿಜೆಪಿ ಕೋರ್ ಸಮಿತಿಯ ಸಭೆ ನಡೆಸಿ, ಚುನಾವಣಾ ಕಾರ್ಯತಂತ್ರ ಹಾಗೂ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಛಪ್ರಾದ ಅಖಂಡ ಜ್ಯೋತಿ ಆಸ್ಪತ್ರೆಗೆ ಭೇಟಿ ನೀಡುವ ಅವರು, ಸಂಜೆ 4:30ಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದಾರೆ. ಸಂಜೆ 5:30ಕ್ಕೆ ಪಾಟ್ನಾದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಾಂಸ್ಥಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಗಳಲ್ಲಿ ಸಮಿತಿಗಳ ರಚನೆ, ಚುನಾವಣಾ ತಂತ್ರ ಹಾಗೂ ಸಿದ್ಧತೆಗಳ ಅಂತಿಮ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa