ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ‍್ಯಾಲಿ
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ, ಇವರ ಸಂಯುಕ್ತಾಶ್ರಯದಲ್ಲಿ 2025ರ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿಯಲ್ಲ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ‍್ಯಾಲಿ


ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ, ಇವರ ಸಂಯುಕ್ತಾಶ್ರಯದಲ್ಲಿ 2025ರ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಭಾಗವಾಗಿ ಸೈಕಲ್ ರ‍್ಯಾಲಿ ಯನ್ನು ಹಮ್ಮಿಕೊಳ್ಳಲಾಗಿದೆ.

ರ್ರ್ಯಾಲಿಯು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 07.00 ಗಂಟೆಗೆ ಜಯನಗರದ ಅಶೋಕ ಪಿಲ್ಲರ್ ನಿಂದ ಪ್ರಾರಂಭಗೊಂಡು ಲಾಲ್ ಬಾಗ್ ಮಾರ್ಗವಾಗಿ ವಿಧಾನ ಸೌಧ ವರೆಗೆ ತಲುಪಲಿದ್ದು. ಈ ಸೈಕಲ್ ರ‍್ಯಾಲಿ ಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಭಾಗವಹಿಸಲು ಅವಕಾಶವಿರುತ್ತದೆ.

ಜನಪರ ಪ್ರತಿನಿಧಿಗಳು/ ಸಮುದಾಯದ ಮುಖಂಡರು ಹಾಗೂ ಎಲ್ಲಾ ಸಾರ್ವಜನಿಕರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸೈಕಲ್ ರ‍್ಯಾಲಿಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande