ಹೊಸಪೇಟೆ : ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಹೊಸಪೇಟೆ, 13 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೊಸಪೇಟೆ ನಗರದ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಸೆ.15 ರಂದು, ಸೋಮವಾರ, ಬೆ.1030 ಕ್ಕೆ ಗಂಟೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭ ಜರುಗಲಿದೆ. ವಸತಿ,
ಹೊಸಪೇಟೆ : ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ


ಹೊಸಪೇಟೆ, 13 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೊಸಪೇಟೆ ನಗರದ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಸೆ.15 ರಂದು, ಸೋಮವಾರ, ಬೆ.1030 ಕ್ಕೆ ಗಂಟೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭ ಜರುಗಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ದ್ವಜಾರೋಹಣ ನೆರವೇರಿಸಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಘನ ಉಪಸ್ಥಿತಿ ವಹಿಸಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಎನ್.ರೂಪೇಶ್ ಕುಮಾರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ಸ್ವಾಗತಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande