ನವದೆಹಲಿ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದ್ದು, ಈ ದುಃಖದ ಕ್ಷಣದಲ್ಲಿ ತಮ್ಮ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ ಎಂದು ಪ್ರಧಾನಿ ಹೇಳಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿಯ ಪ್ರಕಾರ, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡ ಪ್ರತಿಯೊಬ್ಬರಿಗೂ 50,000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದೆ.
ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆಯ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಟ್ರಕ್ ನಿಯಂತ್ರಣ ತಪ್ಪಿ ಭಕ್ತರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ೯ ಜನರು ಸಾವನ್ನಪ್ಪಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತಪಟ್ಟವರಲ್ಲಿ ಕೆಲವು ಎಂಜಿನಿಯರಿಂಗ್ ವಿದ್ಯಾರ್ಥಿಗಳೂ ಸೇರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa