ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಧಾರವಾಡ, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಪ್ರಯುಕ್ತ ಧಾರವಾಡ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ 16, 2025 ರಂದು ಆಯೋಜಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಸ್ಪರ್ಧೆಗಳನ್ನು ಸೆಪ್ಟೆಂಬರ 18, 2025 ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 1:30ವರೆಗ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ


ಧಾರವಾಡ, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಪ್ರಯುಕ್ತ ಧಾರವಾಡ ಜಿಲ್ಲೆಯ ಹಿರಿಯ ನಾಗರಿಕರಿಗೆ ಸೆಪ್ಟೆಂಬರ 16, 2025 ರಂದು ಆಯೋಜಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಸ್ಪರ್ಧೆಗಳನ್ನು ಸೆಪ್ಟೆಂಬರ 18, 2025 ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 1:30ವರೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾಕೂಟವನ್ನು ಹಾಗೂ ಅದೇ ದಿನ ಮದ್ಯಾಹ್ನ 2:30 ಯಿಂದ ಸಂಜೆ 5:30 ವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕ್ರೀಡಾ ಸ್ಪರ್ಧೆಗಳಾದ ಬಿರುಸಿನ ನಡಿಗೆ, ಬಾಲ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಜಿಕಲ್ ಚೇರ್ಸ್ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಾದ ಗಾಯನ ಸ್ಪರ್ಧೆ, ಏಕಪಾತ್ರಾಭಿನಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಆಸಕ್ತರು ಹಿರಿಯ ನಾಗರಿಕರ ಗುರುತಿನ ಚೀಟಿ ಅಥವಾ ವಯಸ್ಸಿನ ಪ್ರಮಾಣ ಪತ್ರ (ಶಾಲಾ ದಾಖಲಾತಿ/ಆಧಾರ ಕಾರ್ಡ)ವನ್ನು ಕಡ್ಡಾಯವಾಗಿ ತರುವುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2744474 ಹಾಗೂ ಅಣ್ಣಪ್ಪ ಕೋಳಿ (9945731984) ನ್ನು ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande