ಹಾಸನ, 13 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕರ್ನಾಟಕದ ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಭೀಕರ ಅಪಘಾತ ಸಂಭವಿಸಿ ೮ ಮಂದಿ ಸಾವನಪ್ಪಿ ೨೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಹಾಸನದಿಂದ ಹೊಳೆನರಸಿಪುರ ಮಾರ್ಗವಾಗಿ ಹೋಗುತ್ತಿದ್ದ ಮಿನಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ವಿಸರ್ಜನೆ ನಡೆಯುತ್ತಿದ್ದ ಮೆರವಣಿಗೆ ಜನರ ಮೇಲೆ ಹರಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಮೊಸಳೆ ಹೊಸಹಳ್ಳಿ, ಹಿರೇಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ಏಕಾಏಕಿ ಕ್ಯಾಂಟರ್ ವಾಹನ ಮೆರವಣಿಗೆಯ ಮೇಲೆ ನುಗ್ಗಿದ ಪರಿಣಾಮ ಈ ಘಟನೆ ಸಂಭವಿಸಿದ್ದು ಸದ್ಯ ಮೃತರನ್ನ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಂಭೀರ ಗಾಯಗಳಾಗಿರುವ ವ್ಯಕ್ತಿಗಳನ್ನ ಹಾಸನ ಮತ್ತು ಹೊಳೆನರಸೀಪುರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರು ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತಪಟ್ಟ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ತೀವ್ರ ದುಃಖ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ತಿಳಿದು ಆಘಾತವಾಗಿದೆ ಮೃತ ಕುಟುಂಬಗಳಿಗೆ ಆಳವಾದ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa