ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ಕೊಡಲಿ. ಎಸ್ಐಟಿಯವರು ಷಢ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಖಾತ್ರಿ ಆಗಿದೆ, ಅದಕ್ಕಾಗಿಯೇ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ತಿವೆ, ಅವುಗಳನ್ನೂ ತನಿಖೆ ಮಾಡುತ್ತಿದ್ದಾರೆ. ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಅನ್ನುವ ರಾಜಕೀಯ ಒತ್ತಡ ಇದೆ. ಅದಕ್ಕಾಗಿ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡುತಿದೆ ಎಸ್ಐಟಿ ಇಲ್ಲಿವರೆಗೆ ಆಗಿರುವ ತನಿಖೆ ಬಗ್ಗೆ ವರದಿತನ್ನು ಎಸ್ಐಟಿ ಕೊಡಲಿ ಎಂದು ಬೊಮ್ಮಾಯಿ ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa