ಸಾರ್ವಜನಿಕರಿಂದ  ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್
ಧಾರವಾಡ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೆಂಗಳೂರಿನ ಶ್ರೀನಿವಾಸ ಹೆಲ್ತ್‌
ಸಾರ್ವಜನಿಕರಿಂದ  ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್


ಧಾರವಾಡ, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಇಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೆಂಗಳೂರಿನ ಶ್ರೀನಿವಾಸ ಹೆಲ್ತ್‌ ಕೇರ್‌ ಸಹಯೋಗದಲ್ಲಿ ಸಚಿವರ ನಿವಾಸದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಹಾಗೂ ಶ್ರವಣ ಸಾಧನ ವಿತರಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಚಿವರು, ವಿದ್ಯಾರ್ಥಿಗಳು, ರೈತರು ಸೇರಿದಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದರು.

ಕಲಘಟಗಿಯಲ್ಲಿ ಇದೇ ಮೊದಲ ಬಾರಿಗೆ ಶ್ರವಣದೋಷ ಚಿಕಿತ್ಸಾ ಶಿಬಿರ ಹಾಗೂ ಶ್ರವಣ ಸಾಧನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಸಂತೋಷ್‌ ಲಾಡ್‌ ಫೌಂಡೇಶನ್‌ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಈ ಬಾರಿ ಶ್ರವಣ ದೋಷ ತಪಾಸಣೆ ಹಾಗೂ ಶ್ರವಣ ಸಾಧನ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮದಿಂದ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಹೇಳಿದರು.

ಅಗತ್ಯವಿದಲ್ಲಿ ಮತ್ತೆ ಮುಂದಿನ 6 ತಿಂಗಳಲ್ಲಿ ಇದೇ ರೀತಿ ಶ್ರವಣ ದೋಷ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗುವುದಾಗಿ ತಿಳಿಸಿದರು.

200 ಕ್ಕೂ ಹೆಚ್ಚು ಜನರಿಗೆ ಶ್ರವಣ ಸಾಧನಗಳನ್ನು ವಿತರಣೆ ಮಾಡಲಾಯಿತು. ಸಾಕಷ್ಟು ಜನರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು.

ಕಲಘಟಗಿ ಪಟ್ಟಣ ಸೇರಿದಂತೆ ಸುತ್ತ ಮುತ್ತಲ ಹಳ್ಳಿಗಳಿಂದ ಸಾರ್ವಜನಿಕರು ಶಿಬಿರಕ್ಕೆ ಭೇಟಿ ನೀಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande