ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಹೆಚ್ಎಎಲ್ ಮುಖ್ಯದ್ವಾರದ ಬಳಿ ಬೆಳಗಿನ ಜಾವ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕ ಮತ್ತು ನಿರ್ವಾಹಕರ ಸಮಯಪ್ರಜ್ಞೆಯಿಂದ 75 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಬೆಳಗಿನ ಜಾವ ನಡೆದ ಈ ದುರಂತದಲ್ಲಿ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಯಿತು. ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕರು ತಕ್ಷಣ ವಾಹನ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದರು. ಕೆಲವೇ ಕ್ಷಣಗಳಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa