ಮುಳಬಾಗಿಲಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಮುಳಬಾಗಿಲಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಚಿತ್ರ :ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಅವರ ಮೇಲೆ ನಡೆದ ಹಲ್ಲೆಯನ್ನು ಕರ್ನಾಟಕ ರಾಜ್ಯ ಸಾವಿತ್ರಿ ಬಾಪುಲೆ ಶಿಕ್ಷಕಿಯರ ಸಂಘದ ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷೆ ಡಿ.ರಾಜೇಶ್ವರಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.


ಕೋಲಾರ, ೧೫ ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಜಾಪ್ರಭುತ್ವ ವ್ಯವಸ್ಥೆಯು ದೇಶದಲ್ಲಿ ಗಟ್ಟಿಯಾಗಿರಲು ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸದ್ರೃಢ ಸಂವಿಧಾನ ಕಾರಣವಾಗಿದೆ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿವ್ಯಕ್ತಿಗೂ ತನ್ನದೇ ಆದ ಹಕ್ಕುಗಳನ್ನು ನೀಡಿ ಸಮಾನತೆ ನೀಡಿ ವಿಶ್ವಕ್ಕೆ ಮಾದರಿ ಅಂಬೇಡ್ಕರ್ ಆಗಿದ್ದಾರೆ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದರು.

ಮುಳಬಾಗಿಲು ನಗರದ ನೇತಾಜಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೇತಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಂವಿಧಾನ ಪೀಠಿಕೆ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳ ಸಂವಿಧಾನಗಳಿಗೆ ಮಾರ್ಗದರ್ಶಿ ನಮ್ಮ ಸಂವಿಧಾನವಾಗಿದೆ, ಸಮಾನತೆ, ಭ್ರಾತೃತ್ವ ದೇಶದಲ್ಲಿ ವಾಸಿಸುವ ಪ್ರತಿವ್ಯಕ್ತಿಗೂ ಹಾಗೂ ಪ್ರತಿ ಸಮುದಾಯಕ್ಕೂ ಜೀವಿಸುವ ಹಕ್ಕನ್ನು ಕಲ್ಪಿಸಿದೆ ಇಂತಹ ಸಂವಿಧಾನ ಪೀಠಿಕೆ ನಮನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ತಹಸೀಲ್ದಾರ್ ವಿ.ಗೀತಾ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರವನ್ನು ಒತ್ತಿ ಹೇಳುತ್ತದೆ. ಮತದಾನವು ಬರೀ ಹಕ್ಕು ಮಾತ್ರವಲ್ಲ, ಬದಲಾಗಿ ಅದೊಂದು ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಸಾರಲಿದೆ.

ಈ ಕಾರ್ಯಕ್ರಮವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿ ಸದೃಢವಾದ ಸಂವಿಧಾನ ನೀಡಿರುವ ಡಾ.ಅಂಬೇಡಕರ್ ರವರನ್ನು ನೆನೆಯಬೇಕೆಂದರು.

ಕಾರ್ಯಕ್ರಮದಲ್ಲಿ ತಾ.ಪಂ ಇಓ ಡಾ.ಕೆ ಸರ್ವೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಮುನಿವೆಂಕಟಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಚಿತ್ರ : ಮುಳಬಾಗಿಲು ನಗರದ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಶಾಸಕ ಸಮೃದ್ಧಿ ಮಂಜುನಾಥ್ ಮಾಲಾರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande