ಸೆಪ್ಟಂಬರ್ ಮಾಹೆಗೆ ಪಡಿತರ ಧ್ಯಾನ ವಿತರಣೆ : ಜಿಲ್ಲಾಧಿಕಾರಿ ನಿತೀಶ್ ಕೆ
ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025ರ ಸೆಪ್ಟೆಂಬರ್ ಮಾಹೆಗೆ ಪಡಿತರ ಧ್ಯಾನಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ
ಸೆಪ್ಟಂಬರ್ ಮಾಹೆಗೆ ಪಡಿತರ ಧ್ಯಾನ ವಿತರಣೆ : ಜಿಲ್ಲಾಧಿಕಾರಿ ನಿತೀಶ್ ಕೆ


ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025ರ ಸೆಪ್ಟೆಂಬರ್ ಮಾಹೆಗೆ ಪಡಿತರ ಧ್ಯಾನಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 21 ಕೆ.ಜಿ ಜೋಳ ಮತ್ತು 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಕೇಂದ್ರ ವ್ಯಾಪ್ತಿಯ ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 03 ಕೆ.ಜಿ ಜೋಳ ಮತ್ತು 02 ಕೆ.ಜಿ ಸಾರವರ್ಧಿತ ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಏಕ ಸದಸ್ಯ, ದ್ವಿ ಸದಸ್ಯ ಮತ್ತು ತ್ರಿ ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಅಂತ್ಯೋದಯ(ಎಎವೈ) ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ (ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande