ದಸರಾ ಉದ್ಘಾಟನೆ ವಿವಾದ ; ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ. ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಹಾಗೂ ಗೌರವ್ ಅವರು ಸಲ್ಲಿಸಿದ್
Pil


ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಹಾಗೂ ಗೌರವ್ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಬಾನು ಮುಷ್ತಾಕ್ ಅವರು ಹಿಂದೂ ಧರ್ಮ ಮತ್ತು ಕನ್ನಡದ ಬಗ್ಗೆ ನಿಂದನೀಯ ಹೇಳಿಕೆ ನೀಡಿದ್ದಾರೆ. ದಸರಾ ಧಾರ್ಮಿಕ ಆಚರಣೆ, ಉದ್ಘಾಟನೆಗೆ ಬಂದವರು ಹೂವಿನ ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿಗಳನ್ನು ನೆರವೇರಿಸಬೇಕಾಗುತ್ತದೆ. ಆದ್ದರಿಂದ ಅವರ ಆಯ್ಕೆ ಅಸಂಬದ್ಧ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಪ್ರತಿಯಾಗಿ ಪೀಠ, ವಾಕ್ ಸ್ವಾತಂತ್ರ್ಯವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಇಲ್ಲಿ ಸಂವಿಧಾನದ ಯಾವ ಹಕ್ಕು ಉಲ್ಲಂಘನೆಯಾಗಿದೆ, ಸಂವಿಧಾನದ 26ನೇ ವಿಧಿಯ ಉಲ್ಲಂಘನೆ ಹೇಗೆ ಸಂಭವಿಸಿದೆ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಬಾನು ಮುಷ್ತಾಕ್ ಅವರನ್ನು ಹಿಂದೂ ವಿರೋಧಿ ಎನ್ನುವುದು ಸರಿಯಲ್ಲ. ಅವರು ಚಾಮುಂಡಿ ಬೆಟ್ಟಕ್ಕೆ ಹೋಗಲು ಬಯಸಿದ್ದಾರೆ. ಧರ್ಮ ಆಧಾರಿತ ತಾರತಮ್ಯ ತಪ್ಪು. ದಸರಾ ಉದ್ಘಾಟನೆ ಮಾಡಿದ ನಿಸಾರ್ ಅಹಮದ್ ಅವರ ಸಮಯದಲ್ಲಿ ವಿರೋಧ ವ್ಯಕ್ತವಾಗಲಿಲ್ಲ. ಈಗ ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ವಾದಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ಬಾನು ಮುಷ್ತಾಕ್ ಅವರ ಆಯ್ಕೆಯಿಂದ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆಗಿಲ್ಲ. ವಿಜಯದಶಮಿ ವಿಜಯದ ಪ್ರತೀಕ. ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ ಎಂದು ಪೀಠ ಸ್ಪಷ್ಟಪಡಿಸಿ ಅರ್ಜಿಗಳನ್ನು ವಜಾಗೊಳಿಸಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande