ಕೋಲಾರ, ೧೫ ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಅವರ ಮನೆಗೆ ತೆರಳಿದ ಕರ್ನಾಟಕ ರಾಜ್ಯ ಸಾವಿತ್ರಿ ಬಾಪುಲೆ ಶಿಕ್ಷಕಿಯರ ಸಂಘದ ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷೆ ಡಿ.ರಾಜೇಶ್ವರಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಬಂಗಾರಪೇಟೆ ಪಟ್ಟಣದ ಪಲವತಿಮ್ಮನಹಳ್ಳಿ ಬಳಿಯಿರುವ ಶಿಕ್ಷಕಿ ಮಂಜುಳಾ ಅವರ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳುಹಿಸದಂತೆ ಶಿಕ್ಷಕಿಯರಿಗೆ ಸರ್ಕಾರವು ಹೊಸ ನಿಯಮಗಳನ್ನು ತಂದು ರಕ್ಷಣೆಯನ್ನು ಹೊದಗಿಸಿಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಕಿಯ ಮೇಲೆ ಇಂತಹ ಘಟನೆ ನಡೆದಿರುವುದು ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಗುರುದೇವೋಭವ ಎಂಬ ವೇದವಾಕ್ಯದಲ್ಲಿ ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಮಾನದಂಡಗಳಂತೆ ಕಾರ್ಯನಿರ್ವಹಿಸುತ್ತಿದ್ದು, ಇಂತಹ ಘಟನೆಗಳು ನಡೆದಾಗ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವಂತಹ ಸಾಧ್ಯತೆಗಳು ಹೆಚ್ಚಾಗಿದ್ದು, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಈ ಬಗ್ಗೆ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿಪುಲೆ ಉಪಾಧ್ಯಕ್ಷೆ ಅನುಸೂಯ, ಕಾರ್ಯದರ್ಶಿ ಗೀತಾ.ಎ.ಪಿ, ಕೋಲಾರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ, ಬಂಗಾರಪೇಟೆ ತಾಲ್ಲೂಕಿನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ : ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಅವರ ಮೇಲೆ ನಡೆದ ಹಲ್ಲೆಯನ್ನು ಕರ್ನಾಟಕ ರಾಜ್ಯ ಸಾವಿತ್ರಿ ಬಾಪುಲೆ ಶಿಕ್ಷಕಿಯರ ಸಂಘದ ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷೆ ಡಿ.ರಾಜೇಶ್ವರಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್