ಅರಣ್ಯ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು
ಚಾಮರಾಜನಗರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ 15 ಜನ ಅರಣ್ಯ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಬೊಮ್ಮಲಾಪುರ ಗ್ರಾಮದ ರೈತರು ನೀಡಿದ ದೂರಿನ ಮೇರೆಗೆ ಪೊಲೀಸರು ಎರಡು ದಿನಗಳ ವಿಳಂಬದ ಬಳಿಕ ಪ್ರಕರಣ ದಾಖಲಿಸಿದ್ದಾರೆ.
Fir


Fir


ಚಾಮರಾಜನಗರ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ 15 ಜನ ಅರಣ್ಯ ಸಿಬ್ಬಂದಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಬೊಮ್ಮಲಾಪುರ ಗ್ರಾಮದ ರೈತರು ನೀಡಿದ ದೂರಿನ ಮೇರೆಗೆ ಪೊಲೀಸರು ಎರಡು ದಿನಗಳ ವಿಳಂಬದ ಬಳಿಕ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಬೊಮ್ಮಲಾಪುರದಲ್ಲಿ ದನಗಳನ್ನು ಕೊಂದು ತಿನ್ನುತ್ತಿದ್ದ ಹುಲಿಯನ್ನು ಬೋನಿನಲ್ಲಿ ಬೀಳಿಸಲು ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಿಬ್ಬಂದಿಯನ್ನು ಗ್ರಾಮಸ್ಥರು ತಡೆದು, ಬೋನಿನೊಳಗೆ ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಐದು ರೈತರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು.

ರೈತರು ಹಲವು ಬಾರಿ ಹುಲಿಯನ್ನು ಕಾಡಿಗೆ ಓಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ, ಯಾವುದೇ ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯ ಸಮುದಾಯಗಳ ನಡುವಿನ ನಂಬಿಕೆ ಹಾಗೂ ಸಹಕಾರ ಸಂಬಂಧಗಳು ಹಲವು ವರ್ಷಗಳಿಂದ ಉಂಟಾಗಿದ್ದರೂ, ಇತ್ತೀಚಿನ ಘಟನೆಗಳಿಂದಾಗಿ ಅವು ಕುಸಿಯುತ್ತಿವೆ. ಅರಣ್ಯ ಅಂಚಿನ ಸಮುದಾಯಗಳಲ್ಲಿ ಅಪನಂಬಿಕೆಯ ವಾತಾವರಣ ಉಂಟಾಗಿದೆ.

ಮೈಸೂರು ಮತ್ತು ಬೆಂಗಳೂರಿನ ಅರಣ್ಯ ಭವನದಲ್ಲಿ ಕುಳಿತಿರುವ ಹಿರಿಯ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವುದಕ್ಕೆ ಪರಿಸರವಾದಿ ಜೋಸೆಫ್ ಹೂವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಗ್ರಾಮ ಪಂಚಾಯತ್ ಹಾಗೂ ರೈತ ನಾಯಕರೊಂದಿಗೆ ನೇರವಾಗಿ ಮಾತುಕತೆ ನಡೆಸಬೇಕಿತ್ತು” ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಮುದಾಯಗಳೇ ಅರಣ್ಯ, ವನ್ಯಜೀವಿ ಹಾಗೂ ಜೀವವೈವಿಧ್ಯತೆಯ ನಿಜವಾದ ರಕ್ಷಕರು ಎಂದು ಅಭಿಪ್ರಾಯಪಟ್ಟಿರುವ ಅವರು ಒಬ್ಬ ಅಥವಾ ಇಬ್ಬರು ಅಧಿಕಾರಿಗಳ ಅಹಂಕಾರ ಮತ್ತು ನಿರ್ಲಕ್ಷ್ಯದಿಂದ ನಮ್ಮ ಕಾಡುಗಳು ಹಾಗೂ ವನ್ಯಜೀವಿಗಳು ಅಪಾಯಕ್ಕೆ ಸಿಲುಕಬಾರದು ಎಂದು ಜೋಸೆಫ್ ಹೂವರ್ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande