ಜನರ ಭಾವನೆ ಅರ್ಥ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ : ಬೊಮ್ಮಾಯಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದಾರೆ. ಇದು ಜನರ ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯ. ಇದು ಕಾನೂನಿನ ವ್ಯಾಪ್ತಿಯಲ್ಲಿ ತ
ಜನರ ಭಾವನೆ ಅರ್ಥ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ : ಬೊಮ್ಮಾಯಿ


ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ‌ ಆರೋಪಿಸಿದ್ದಾರೆ.

ಇದು ಜನರ ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯ. ಇದು ಕಾನೂನಿನ ವ್ಯಾಪ್ತಿಯಲ್ಲಿ ತೀರ್ಮಾನ ಮಾಡಲು ಆಗುವುದಿಲ್ಲ. ಇದು ರಾಜ್ಯ ಸರ್ಕಾರ ಮಾಡಬೇಕಿರುವ ತೀರ್ಮಾನ, ಬಾನು ಮುಷ್ತಾಕ ಅವರ ಆಯ್ಕೆ ಓಲೈಕೆ ರಾಜಕಾರಣದ ಒಂದು ಭಾಗ, ಬಾನು ಮುಷ್ತಾಕ ಅವರ ಬಗ್ಗೆ ನಮಗೆ ಗೌರವ ಇದೆ. ಆದರೆ, ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande