ಸೆಪ್ಟೆಂಬರ್ 18 ರಿಂದ ಮೂರು ದಿನಗಳ ಕಾಲ ಕನ್ನಡದಲ್ಲಿ 6ನೇ ವಿಜ್ಞಾನ, ತಂತ್ರಜ್ಞಾನ ಸಮ್ಮೇಳನ
ರಾಯಚೂರು, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಕೃಷಿ ವಿವಿಯ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾ ಗೃಹದಲ್ಲಿ ಸೆಪ್ಟೆಂಬರ್ 18, 19 ಹಾಗೂ 20ರಂದು ಕನ್ನಡದಲ್ಲಿ 6ನೇ ವಿಜ್ಞಾನ
ಸೆಪ್ಟೆಂಬರ್ 18 ರಿಂದ ಮೂರು ದಿನಗಳ ಕಾಲ ಕನ್ನಡದಲ್ಲಿ 6ನೇ ವಿಜ್ಞಾನ, ತಂತ್ರಜ್ಞಾನ ಸಮ್ಮೇಳನ


ರಾಯಚೂರು, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಕೃಷಿ ವಿವಿಯ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾ ಗೃಹದಲ್ಲಿ ಸೆಪ್ಟೆಂಬರ್ 18, 19 ಹಾಗೂ 20ರಂದು ಕನ್ನಡದಲ್ಲಿ 6ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸುವರು. ಸ್ಮರಣ ಸಂಚಿಕೆಯ ಮುಖಪುಟವನ್ನು ಸಂಸದರಾದ ಜಿ. ಕುಮಾರ ನಾಯಕ ಅವರು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ರಾಜಾಸಾಬ್ ಎ.ಎಚ್., ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಏಕ್‌ರೂಪ್ ಕೌರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ. ಅವರು ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ. ಶಿವರಾಜ ಎಸ್.ಪಾಟೀಲ್ ಅವರು ವಹಿಸಲಿದ್ದಾರೆ.

ಗೌರವ ಉಪಸ್ಥಿತಿಯನ್ನು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ, ವಿಧಾನ ಪರಿಷತ್ ಶಾಸಕರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬಸನಗೌಡ ಬ್ಯಾಗವಾಟ, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಿ. ಮಲ್ಲಿಕಾರ್ಜುನ, ಮಲ್ಲೇಶ ಕೊಲಿಮಿ, ಮಧುಸೂದನ ರೆಡ್ಡಿ, ತಿಮ್ಮಣ್ಣ ಸೋಮಪ್ಪ ಚಾವಡಿ, ಡೀನ್ ಡಾ. ಕೆ. ನಾರಾಯಣರಾವ್, ಕುಲಸಚಿವರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಕಾರ್ಯದರ್ಶಿಗಳಾದ ಶರಣಬಸಪ್ಪ ಕೋಟೆಪ್ಪಗೋಳ, ಕ.ವಿ.ತಂ. ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ ಆರ್. ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ವಿವಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande