ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಗಳಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರ ನಿರ್ಧರಿಸಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಈ ಕುರಿತು ಪ್ರಕಟಣೆ ನೀಡಿದೆ.
ಬಿಬಿಎಮ್‌ಪಿ ಮತ್ತು ಇತರ ಇಲಾಖೆಗಳ ಮೂಲಕ ನಡೆಸಿದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ–2025 ಸೇರಿದಂತೆ ಹಲವು ಸಮೀಕ್ಷೆಗಳಲ್ಲಿ ಭಾಗವಹಿಸಿದ್ದ ಆಶಾ ಕಾರ್ಯಕರ್ತೆಯರಿಗೆ ನಿಗದಿಯಾಗಿದ್ದ ಬಾಕಿ ಸಂಭಾವನೆ ಈವರೆಗೆ ಪಾವತಿಸಲಾಗಿಲ್ಲ.
ಏಪ್ರಿಲ್ 1ರಿಂದ ಮಾಸಿಕ ರೂ.10,000 ಗ್ಯಾರಂಟಿ ಗೌರವಧನ ನೀಡಲಾಗಿಲ್ಲ. ಅಂದುಕೊಂಡಿದ್ದಂತೆ ಈ ವರ್ಷದ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ನೀಡಿದಂತೆ ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ನೀಡಲಾಗಿಲ್ಲ.
ಸಂಘವು ಬಹುದಿನಗಳ ನ್ಯಾಯಯುತ ಬೇಡಿಕೆಗಳು ಈಡೇರಿಸಿಲ್ಲವೆಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗಳಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa