ಗದಗ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ, ಬೆಂಗಳೂರು, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ, ಬೆಂಗಳೂರು, ಬೆಳಗಾವಿ ನ್ಯಾಯಾಲಯಗಳಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಅಧಿಕಾರಿಗಳನ್ನು ಎದುರುದಾರರನ್ನಾಗಿಸಿ ದಾಖಲಾಗುವ ರಿಟ್ ಅರ್ಜಿಗಳನ್ನು ನಿರ್ವಹಿಸಲು ಆಯಾ ನ್ಯಾಯಾಲಯಗಳಲ್ಲಿ ಕಾಯಂ ಸದಸ್ಯ ನೋಂದಣಿಯಾಗಿರುವ ಜಿಲ್ಲಾ ಪಂಚಾಯತಿ ಹಾಗೂ ಇತರೆ ಕಚೇರಿಗಳ ಪರವಾಗಿ ನ್ಯಾಯವಾದಿಗಳಾಗಿ ಕಾರ್ಯನಿರ್ವಹಿಸಿದ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ಹಾಗೂ ಗ್ರಾಮ ಪಂಚಾಯತಿ ಪರವಾಗಿ ಪ್ರಕರಣಗಳನ್ನು ನಿರ್ವಹಿಸಿದ ಬಗ್ಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರುವ ವಕೀಲರನ್ನು ನೇಮಿಸಿಕೊಳ್ಳುವ ಕುರಿತು ನ್ಯಾಯವಾದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ತಮ್ಮ ಹೆಸರು, ವಯಸ್ಸು, ವಿದ್ಯಾರ್ಹತೆ, ಅನುಭವ, ವಿವಿಧ ಕಚೇರಿಗಳ ಪರವಾಗಿ ನ್ಯಾಯವಾದಿಗಳಾಗಿ ಕಾರ್ಯನಿರ್ವಹಿಸಿದ ವಿವರದ ಕುರಿತು ಆಯಾ ಕಚೇರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಹಾಗೂ ಗ್ರಾಮ ಪಂಚಾಯತ್ /ತಾಲೂಕು ಪಂಚಾಯತ್/ ಜಿಲ್ಲಾ ಪಂಚಾಯತ್‌ಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾದ ಮಂಡಿಸಿದ ಬಗ್ಗೆ ವಿವರ ಸಲ್ಲಿಸಬೇಕು.
ಕನಿಷ್ಟ 10 ರಿಂದ 15 ವರ್ಷ ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ ಬಗ್ಗೆ ಸೂಕ್ತ ಪ್ರಾಧಿಕಾರದಿಂದ ಪಡೆದ ಪ್ರಮಾಣಪತ್ರ ಅಥವಾ ನೋಂದಣಿ ಪ್ರಮಾಣ ಪತ್ರ ಸಲ್ಲಿಸುವುದು. ಆಸಕ್ತ ನ್ಯಾಯವಾದಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಯನ್ನು ಜಿಲ್ಲಾ ಪಂಚಾಯತಿ ಕಾರ್ಯಾಲಯಕ್ಕೆ ಸೆಪ್ಟೆಂಬರ್ 26 ರೊಳಗೆ ಸಲ್ಲಿಸಬೇಕು. ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP