ಆನಂದಕುಮಾರ್ ವೇಲ್‌ಕುಮಾರ್‌ಗೆ ಚಿನ್ನ ; ಭಾರತದ ಮೊದಲ ವಿಶ್ವ ಚಾಂಪಿಯನ್
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಆನಂದಕುಮಾರ್ ವೇಲ್‌ಕುಮಾರ್ ಇತಿಹಾಸ ನಿರ್ಮಿಸಿದ್ದಾರೆ. ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದು, ಅವರು ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
Champion


ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಆನಂದಕುಮಾರ್ ವೇಲ್‌ಕುಮಾರ್ ಇತಿಹಾಸ ನಿರ್ಮಿಸಿದ್ದಾರೆ. ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದು, ಅವರು ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆನಂದಕುಮಾರ್ ಅವರನ್ನು ಅಭಿನಂದಿಸಿ, “ಅವರ ಧೈರ್ಯ, ವೇಗ ಮತ್ತು ಚೈತನ್ಯವೇ ಈ ಸಾಧನೆಗೆ ಕಾರಣವಾಗಿದೆ. ಅವರ ಜಯ ಅಸಂಖ್ಯಾತ ಯುವಕರಿಗೆ ಸ್ಫೂರ್ತಿ ನೀಡುತ್ತದೆ” ಎಂದು ಹೇಳಿದರು.

ಆನಂದಕುಮಾರ್ ಅವರ ಈ ಸಾಧನೆ ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಮಹತ್ತರ ಗೌರವ ತಂದಿದೆ. ತಾವು ಭವಿಷ್ಯದಲ್ಲಿಯೂ ದೇಶಕ್ಕೆ ಇನ್ನಷ್ಟು ಕೀರ್ತಿ ತಂದುಕೊಡಲೆಂದು ಪ್ರಧಾನ ಮಂತ್ರಿ ಶುಭ ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande