ಸಿದ್ದರಾಮಯ್ಯ ವಿರುದ್ಧ ಹೆಚ್. ವಿಶ್ವನಾಥ್ ವಾಗ್ದಾಳಿ
ಮೈಸೂರು, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಮುಂದಾಗಿರುವುದು ರಾಜಕೀಯ ಲಾಭಕ್ಕಾಗಿ ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದರಾಮಯ್ಯ
ಸಿದ್ದರಾಮಯ್ಯ ವಿರುದ್ಧ ಹೆಚ್. ವಿಶ್ವನಾಥ್ ವಾಗ್ದಾಳಿ


ಮೈಸೂರು, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಮುಂದಾಗಿರುವುದು ರಾಜಕೀಯ ಲಾಭಕ್ಕಾಗಿ ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಆಸಕ್ತಿ ಇದ್ದಿದ್ದರೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಬೇಕಿತ್ತು, ಆದರೆ ಈಗ ಕುರುಬರನ್ನು ಒಂದೆಡೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಕುರುಬ ಸಮುದಾಯದಿಂದ ಎಲ್ಲವೂ ಪಡೆದಿದ್ದರೂ, ಅವರಿಗೆ ಯಾವುದೇ ಪ್ರಯೋಜನ ಮಾಡಿಲ್ಲ. ಕುರುಬ ನಾಯಕರನ್ನು ಬೆಳೆಸದೆ, ನಾಯಕತ್ವವನ್ನು ತುಳಿದಿದ್ದಾರೆ ಎಂದು ಆರೋಪಿಸಿದ್ದು, ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು ಎಂದು ಕುರುಬ ಸ್ವಾಮೀಜಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande