ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಮಂಡಿಯಲ್ಲಿ ಮೂವರ ಸಾವು ; ಇಬ್ಬರು ನಾಪತ್ತೆ
ಶಿಮ್ಲಾ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭಾರಿ ಹಾನಿ ಸಂಭವಿಸಿದೆ. ಮಂಡಿ ಜಿಲ್ಲೆಯ ನಿಹಾರಿ ಪ್ರದೇಶದಲ್ಲಿ ಭೂಕುಸಿತದಿಂದ ಮೂವರು ಸಾವನ್ನಪ್ಪಿದ್ದು, ಧರಂಪುರದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಧರಂಪುರದಲ್ಲಿ ಸೋನ್‌ಖಾಡ್ ಹಾಗೂ ಹತ್
Flood


ಶಿಮ್ಲಾ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭಾರಿ ಹಾನಿ ಸಂಭವಿಸಿದೆ. ಮಂಡಿ ಜಿಲ್ಲೆಯ ನಿಹಾರಿ ಪ್ರದೇಶದಲ್ಲಿ ಭೂಕುಸಿತದಿಂದ ಮೂವರು ಸಾವನ್ನಪ್ಪಿದ್ದು, ಧರಂಪುರದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ.

ಧರಂಪುರದಲ್ಲಿ ಸೋನ್‌ಖಾಡ್ ಹಾಗೂ ಹತ್ತಿರದ ಚರಂಡಿಗಳು ಉಕ್ಕಿ ಹರಿದು ಬಸ್ ನಿಲ್ದಾಣ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಅನೇಕ ಬಸ್ಸುಗಳು ಹಾಗೂ ವಾಹನಗಳು ಕೊಚ್ಚಿ ಹೋಗಿದ್ದು, ಇಬ್ಬರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿಹಾರಿಯ ಬೋಯಿ ಪಂಚಾಯತ್‌ನ ಬ್ರಾಗ್ಟಾ ಗ್ರಾಮದಲ್ಲಿ ಗುಡ್ಡ ಕುಸಿದು ಮನೆ ಮಣ್ಣಿನಡಿ ಸಿಲುಕಿ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸಾವನ್ನಪ್ಪಿದ್ದಾರೆ.

ರಾಜಧಾನಿ ಶಿಮ್ಲಾದಲ್ಲಿ ಮರಗಳು ಉರುಳಿ, ವಾಹನಗಳಿಗೆ ಹಾನಿಯಾಗಿದೆ. ಬಿಸಿಎಸ್ ಹಾಗೂ ಹಿಮ್ಲ್ಯಾಂಡ್ ಪ್ರದೇಶಗಳಲ್ಲಿ ಹಲವು ವಾಹನಗಳು ಅವಶೇಷಗಳಡಿಯಲ್ಲಿ ಸಿಲುಕಿದರೂ, ಯಾವುದೇ ಜೀವಹಾನಿ ಸಂಭವಿಸಿಲ್ಲ.

ಬಿಲಾಸ್ಪುರ, ಕಾಂಗ್ರಾ, ಮಂಡಿ, ಶಿಮ್ಲಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 17 ರಿಂದ 20ರ ವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 20ರಿಂದ ಹವಾಮಾನ ಕ್ರಮೇಣ ಸುಧಾರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande