ರಾಯಚೂರು, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2025ರ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವು ಸೆ.17ರ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸುವರು. ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್