ಕೊಪ್ಪಳ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ಕಚೇರಿ ಸೇರಿ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕೊಪ್ಪಳ ನಗರಸಭೆ ಕಚೇರಿ ಸೇರದಂತೆ ನಗರಸಭೆ ಜೂನಿಯರ್ ಎಂಜಿನಿಯರ್ (ಜೆಇ) ಸೋಮಲಿಂಗಪ್ಪ ಅವರ ಮನೆ. ಕಂದಾಯ ನಿರೀಕ್ಷಕ ಉಜ್ವಲ್ ಅವರ ಮನೆ. ಗುತ್ತಿಗೆದಾರ ಶಕೀಲ್ ಪಟೇಲ್ (ನಗರಸಭೆ ಅಧ್ಯಕ್ಷರ ಸಹೋದರ) ಅವರ ಮನೆ. ಗುತ್ತಿಗೆದಾರ ಪ್ರವೀಣ ಕಂದಾರಿ ಅವರ ಮನೆ ಮೇಲೆ ದಾಳಿ ಲೋಕಾಯುಕ್ತರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
2023-24ನೇ ಸಾಲಿನ ನಗರಸಭೆ ಅನುದಾನದಲ್ಲಿ 10 ಕೋಟಿ ರೂಪಾಯಿಗೂ ಹೆಚ್ಚು ಹಣ ದುರ್ಬಳಕೆ ಆಗಿದೆ ಎನ್ನುವ ಆರೋಪ ವ್ಯಾಪಕವಾಗಿತ್ತು. 336 ಕಾಮಗಾರಿಗಳಲ್ಲಿ ಬಹುತೇಕ ಕಾಮಗಾರಿಗಳು ಅಧರ್ಂಬರ್ಧವಾಗಿದ್ದು, ಪೂರ್ಣಗೊಂಡಿಲ್ಲ ಎನ್ನುವ ವಿಚಾರವಿತ್ತು. ಕೆಲವು ಕಡೆಗಳಲ್ಲಿ ಕಾಮಗಾರಿ ನಡೆದಿಲ್ಲದಿದ್ದರೂ ಹಣ ಬಿಡುಗಡೆ ಆಗಿರುವ ದೂರುಗಳಿದ್ದವು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ ಎನ್ನಲಾಗಿದೆ.
ಡಿವೈಎಸ್ಪಿ ವಸಂತಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇನ್ಸ್‍ಪೆಕ್ಟರ್‍ಗಳಾದ ವಿಜಯಕುಮಾರ್, ಚಂದ್ರಪ್ಪ, ನಾಗರತ್ನ, ಶೈಲಾ, ಅಮರೇಶ ಹುಬ್ಬಳ್ಳಿ ಸೇರಿ ಹಲವು ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್