ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳ ವಿವರ : ನೇರ ಸಾಲ ಯೋಜನೆ, ಡಾ.ಬಾಬು ಜಗಜೀವನ್ ರಾಂ ಚರ್ಮಕಾರರ ವಸತಿ ಯೋಜನೆ, ಚರ್ಮ ಕುಶಲಕರ್ಮಿ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಞಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಅಕ್ಟೋಬರ್ 08 ರೊಳಗಾಗಿ ನಿಗಮದ ವೆಬ್‍ಸೈಟ್ https://sevasindhu.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-271741, 9844667691 ಅಥವಾ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಕಟ್ಟದಲ್ಲಿನ ಲಿಡ್‍ಕರ್‍ನ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್