ಕಲ್ಲುಕಂಭ ಗ್ರಾಮದ ವ್ಯಕ್ತಿ ಕಾಣೆ
ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕಲ್ಲುಕಂಭ ಗ್ರಾಮದ ಶಿವಾನಂದ (31) ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಸೆ.08 ರಂದು ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವ ಮರಳಿ ಬಾರದೇ ಕಾಣೆಯಾಗಿದ್ದು, ಈ ಕುರಿತು
ಕಲ್ಲುಕಂಭ ಗ್ರಾಮದ ವ್ಯಕ್ತಿ ಕಾಣೆ


ಬಳ್ಳಾರಿ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕಲ್ಲುಕಂಭ ಗ್ರಾಮದ ಶಿವಾನಂದ (31) ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಸೆ.08 ರಂದು ಹೊರಗಡೆ ಹೋಗಿಬರುತ್ತೇನೆ ಎಂದು ಹೇಳಿಹೋದವ ಮರಳಿ ಬಾರದೇ ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‍ಐ ತಿಳಿಸಿದ್ದಾರೆ.

ಚಹರೆ: ಅಂದಾಜು 5.9 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಬಲಕೈಯಲ್ಲಿ ಎಸ್.ವಿ ಎಂದು ಇಂಗ್ಲೀಷ್‍ನಲ್ಲಿ ಅಚ್ಚೆ ಮತ್ತು ಎಡಕೈನಲ್ಲಿ ಕಾವೇರಿ ಎಂದು ಕನ್ನಡದಲ್ಲಿ ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಬಲಗಣ್ಣು ಉಬ್ಬಿನ ಹತ್ತಿರ ಹಳೆ ಗಾಯದ ಗುರುತು ಇರುತ್ತದೆ.

ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬುತೋಳಿನ ಚೆಕ್ಸ್ ಅಂಗಿ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಹಾಗೂ ಅಲ್ಪ ಹಿಂದಿ ಮಾತನಾಡುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande