ನಾಳೆ ಸ್ವಸ್ಥ ನಾರಿ–ಸಶಕ್ತ ಪರಿವಾರ್ ಅಭಿಯಾನಕ್ಕೆ ಪ್ರಧಾನಿ ಚಾಲನೆ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಸ್ವಸ್ಥ ನಾರಿ–ಸಶಕ್ತ ಪರಿವಾರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದರ ಅಡಿಯಲ್ಲಿ ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗಾಗಿ ಆರೋಗ್ಯ ಶಿಬಿರಗಳು ಆಯೋಜಿಸಲಾಗುತ್ತದೆ. ಈ ಅಭಿಯಾನವು 8ನೇ ರಾಷ್ಟ್ರೀಯ ಪೋಷಣ್ ಮಾ
ನಾಳೆ ಸ್ವಸ್ಥ ನಾರಿ–ಸಶಕ್ತ ಪರಿವಾರ್ ಅಭಿಯಾನಕ್ಕೆ ಪ್ರಧಾನಿ ಚಾಲನೆ


ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಸ್ವಸ್ಥ ನಾರಿ–ಸಶಕ್ತ ಪರಿವಾರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದರ ಅಡಿಯಲ್ಲಿ ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗಾಗಿ ಆರೋಗ್ಯ ಶಿಬಿರಗಳು ಆಯೋಜಿಸಲಾಗುತ್ತದೆ.

ಈ ಅಭಿಯಾನವು 8ನೇ ರಾಷ್ಟ್ರೀಯ ಪೋಷಣ್ ಮಾಹ್ (ಸೆಪ್ಟೆಂಬರ್ 17 – ಅಕ್ಟೋಬರ್ 16) ಆರಂಭವನ್ನೂ ಸೂಚಿಸುತ್ತದೆ. ಆರೋಗ್ಯ ಹಾಗೂ ಪೋಷಣೆಯ ಮಹತ್ವವನ್ನು ಹೆಚ್ಚಿಸಲು ಈ ಕಾರ್ಯಕ್ರಮ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande