ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂದಿನ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa