ಕೂಡ್ಲಿಗಿ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಖಾಸಗಿ ಬಸ್ಸು, ಆತುರದಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಎಂಟು ಜನ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-50ರ ಬಿಷ್ಣಹಳ್ಳಿ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮೃತರು ಗಂಗಾವತಿ ತಾಲ್ಲೂಕು ಮಲ್ಲಾಪುರ ಗ್ರಾಮದ ಸುರೇಶ ಜನಾರ್ದನ (45) ಮತ್ತು ಕುಷ್ಟಗಿ ತಾಲ್ಲೂಕಿನ ನಿರಲೂಟಿ ಗ್ರಾಮದ ಮನೋಜ್ ಬಂಡಿ (28) ಎಂದು ಪೊಲೀಸರು ತಿಳಿಸಿದ್ದಾರೆ.
ಮುದಗಲ್‍ನಿಂದ ಬೆಂಗಳೂರುಗೆ ಹೊರಟಿದ್ದ ಖಾಸಗಿ ಬಸ್ ಚಾಲಕ ಬಿಷ್ಣಹಳ್ಳಿ ಕ್ರಾಸ್ ಬಳಿ ಬಂದಾಗ ಲಾರಿಯನ್ನು ಹಿಂದಿಕ್ಕಲು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಮುಂದೆ ಹೋಗುತ್ತಿದ್ದ ಮತ್ತೊಂದು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಕಾರಣ ಈ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಸುನಿಲ್, ಬಾಬುಜಾನ್, ವಿಶ್ವೇಶ, ಹನುಮನಗೌಡ, ಮಂಜುನಾಥ, ಆರುಣ್, ಸೈಯಾದ್, ಹೆಸರು ತಿಳಿಯದ ಮತ್ತೊಬ್ಬರು ಗಾಯಗೊಂಡಿದ್ದು, ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಬೇರೆ ಆಸ್ಪತ್ರೆಗೆ ತೆರಳಿದ್ದಾರೆ.
ವಿಷಯ ತಿಳಿದ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಜಾಹ್ನವಿ ಎಸ್., ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಕೊಟ್ಟೂರು ಸಿಪಿಐ ದುರುಗಪ್ಪ, ಕಾನ ಹೊಸಹಳ್ಳಿ ಪಿಎಸೈ ಸಿದ್ದರಾಮ ಬಿದರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಸ್ ಚಾಲಕ ವಿರುದ್ದ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa