ಗದಗ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ 14 ಕೋಟಿ ಸದಸ್ಯರನ್ನು ಹೊಂದುವ ಮೂಲಕ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳಿದಿದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ರವರು ಪತ್ರಿಕಾ ಪ್ರಕಟಣೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಅವರಿಂದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ 2 ಕೋಟಿ ಜನ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರು ವಿಶಾಖಪಟ್ಟಣದಲ್ಲಿ ಏರ್ಪಡಿಸಿದ್ದ ಪಕ್ಷದ ಸಮಾವೇಶದಲ್ಲಿ ಅವರು ಮತನಾಡಿ ದೇಶದ 20 ರಾಜ್ಯಗಳಲ್ಲಿ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದರೆ, ಈ ಪೈಕಿ 13 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಈ ಮೂಲಕ ನಮ್ಮದು ದೇಶದ ಅತಿದೊಡ್ಡ ಪ್ರಾತಿನಿಧಿಕ ಪಕ್ಷವಾಗಿದೆ ಎಂದು ಪ್ರಕಟಿಸಿರುವದು ಸ್ವಾಗತಾರ್ಹ ಎಂದರು.
ಹಿಂದೂಸ್ತಾನ್ ಸಮಾಚಾರ್ / lalita MP