ಹಾವೇರಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಾವೇರಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ನೇಯ ಹುಟ್ಟು ಹಬ್ಬದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ ಹಾಗೂ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಸಂಯೋಜಿತ ಆಸ್ಪತ್ರೆ ಹಾವೇರಿ ವತಿಯಿಂದ ಏರ್ಪಡಿಸಿದ ಸ್ವಸ್ಥ ನಾರಿ - ಸಶಕ್ತ ಪರಿವಾರ ಅಭಿಯಾನವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಬಸವರಾಜ ಶಿವಣ್ಣವರ, ಮಾಜಿ ಶಾಸಕರಾದ ವೀರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಂ.ಎಂ.ಹಿರೇಮಠ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್ ಗಾಜಿಗೌಡ್ರ, ನಗರಸಭೆಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಾತೇನಹಳ್ಳಿ, ಮುಖಂಡರಾದ ಡಿ.ಎಸ್ ಮಾಳಗಿ, ಪರಮೇಶಪ್ಪ ಮೇಗಳಮನಿ, ಡಾ ಬಸವರಾಜ ಕೇಲಗಾರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಶ್ರೀಮತಿ ರುಚಿ ಬಿಂದಲ್, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ ಜಯಾನಂದ, ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ ಪ್ರದೀಪ ಎಂ.ವಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಪಿ.ಆರ್ ಹಾವನೂರ ಸೇರಿದಂತೆ ಪ್ರಮುಖರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa