ನಾಳೆ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ
ವಿಜಯಪುರ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪುರದ ನಂ.6ರಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಾಳೆ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್
ನಾಳೆ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ


ವಿಜಯಪುರ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪುರದ ನಂ.6ರಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಾಳೆ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.

ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ.ಎನ್,ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ‌ ಮೂರ್ತಿ,ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ,ಕೇಶವ ಪ್ರಸಾದ ಎಸ್.ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ‌ ನಾಯ್ಕ,ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ,ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಬೋರಾಮಣಿ ಕಾರ್ಯಕ್ರಮದಲ್ಲಿ ಉಪಸ್ಥಿರಿರಲಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ,ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಬ್.ಜೆ.ಬಿರಾದಾರ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ‌.

ಚಿಗುರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು.ಸಮೀರ ಬಿ ಶೇಖ ಹಾಗೂ ತಂಡದಿಂದ ಸುಗಮ ಸಂಗೀತ,ತಿಕೋಟಾ ತಾಲೂಕಿನ ಅತಾಲಟ್ಟಿಯ ಕು.ಕೃಷ್ಣಾ ಬಾಳಪ್ಪ ತಳವಾರ ಹಾಗೂ ತಂಡದಿಂದ ಶಾಸ್ತ್ರೀಯ ಸಂಗೀತ,ಹೊನವಾಡದ ಕು.ಸಪ್ತಕ ಆನಂದ ಹೊನವಾಡ ಹಾಗೂ ತಂಡದವರಿಂದ ಜನಪದ ಗೀತೆ,ವಿಜಯಪುರದ ಕು.ಪದ್ಮಾ ಕಾಖಂಡಕಿ ಹಾಗೂ ತಂಡದಿಂದ ಸಮೂಹ ನೃತ್ಯ,ಕು.ಪ್ರತೀಕ್ಷಾ ಚೌರಿ ಅವರ ತಂಡದವರಿಂದ ಯಕ್ಷಗಾನ ಹಾಗೂ ಬಬಲೇಶ್ವರದ ಕು.ಸಂಜೀವಿನಿ ಸಂಕಣ್ಣವರ ಹಾಗೂ ತಂಡದಿಂದ ಏಕಪಾತ್ರಾಭಿನಯ ಪ್ರದರ್ಶನ ಜರುಗಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande