ರೈತ ಉತ್ಪಾದಕ ಸಂಸ್ಥೆಗಳ ಯೋಜನಾ ಸಭೆ
ರೈತ ಉತ್ಪಾದಕ ಸಂಸ್ಥೆಗಳ ಯೋಜನಾ ಸಭೆ
ಕೋಲಾರ ನಗರದ ಟಮಕ ಬಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಸೆಹಗಲ್ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈತ ಉತ್ಪಾದಕ ಸಂಸ್ಥೆಯ ಪ್ರತಿನಿಧಿಗಳು.


ಕೋಲಾರ, ಸೆಪ್ಟೆಂಬರ್ ೧೭ (ಹಿ.ಸ) :

ಆ್ಯಂಕರ್ : ಜಿಲ್ಲೆಯ ರೈತರ ಅಭಿವೃದ್ದಿಗಾಗಿ ಹಲವು ಆಯಾಮಗಳಲ್ಲಿ ಶ್ರಮಿಸುತ್ತಿರುವ ಸೆಹಗಲ್ ಫೌಂಡೇಶನ್ ಕಾರ್ಯ ಶ್ಲಾಘನೀಯವಾದದ್ದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಶಿವಾನಂದ ಹೊಂಗಲ್ ಹೇಳಿದರು.

ನಗರ ಹೊರವಲಯದ ಟಮಕ ಬಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೆಹಗಲ್ ಫೌಂಡೇಶನ್ ವತಿಯಿಂದ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ದಿಗಾಗಿ ಹಮ್ಮಿಕೊಂಡಿರುವ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತ ಉತ್ಪಾದಕ ಸಂಸ್ಥೆಗಳನ್ನು ಅಭಿವೃದ್ದಿ ಪಡಿಸಿ, ಆ ಸಂಸ್ಥೆಗಳ ಸಬಲೀಕರಣಕ್ಕಾಗಿ ಯೋಜನೆಗಳನ್ನು ಹಮ್ಮಿಕೊಂಡರೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ರೈತರಿಗೆ ಅನುಕೂಲವಾಗಲಿದೆ. ರೈತರು ಆರ್ಥಿಕವಾಗಿ ಸಬಲರಾದರೆ ಮಾತ್ರ ದೇಶ ಅಭಿವೃದ್ದಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಸೆಹಗಲ್ ಫೌಂಡೇಶನ್ ರೈತರಿಗೆ ವಿವಿಧ ವಿಷಯಗಳಲ್ಲಿ ಕೌಶಲ್ಯ ಮೂಡಿಸುವುದು, ಜಲಸಂಪನ್ಮೂಲಗಳ ರಕ್ಷಣೆ, ರೈತ ಉತ್ದಾದಕ ಸಂಸ್ಥೆಗಳ ಸ್ಥಾಪನೆ ಮತ್ತು ಅವುಗಳ ಮೂಲಕ ವಿವಿಧ ಉಪ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಿ, ಮಾರಕುಟ್ಟೆ ವ್ಯವಸ್ಥೆ ಒದಗಿಸುತ್ತಿದ್ದಾರೆ. ಹಾಗೆಯೇ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಕೈ ಜೋಡಿಸಿರುವುದು ಕೂಡ ಮೆಚ್ಚುವಂತಹ ಉತ್ತಮವಾದ ಕಾರ್ಯ ಎಂದು ಹೇಳಿದರು.

ಸೆಹಗಲ್ ಫೌಂಡೇಶನ್ ನ ದಕ್ಷಿಣ ವಲಯದ ಹಿರಿಯ ಅಧಿಕಾರಿ ಶ್ರುಚಿ ಸಿಂಗ್ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ದಿಗಾಗಿ ಮುಂದಿನ ಎರಡು ವರ್ಷಗಳ ಕಾಲ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾಗಿ ವಿವರಿಸಿದರು.ಜಿಲ್ಲೆಯ ರೈತರ ಅಭಿವೃದ್ದಿಗಾಗಿ ಫೌಂಡೇಶನ್ ತನ್ನ ಶಕ್ತಿ ಮೀರಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅದನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸೆಹಗಲ್ ಫೌಂಡೇಶನ್ ಯೋಜನಾಧಿಕಾರಿ ಶಿವಶರಣಪ್ಪ, ವಿಜಯ್ ಪುಲಿ, ನವ್ಯ, ಇಮ್ರಾನ್ ಖಾನ್, ರಮ್ಯಾ, ನಾಗರಾಜ್, ಲತಾ, ಮಂಜುಳ, ವಿಶ್ವನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ನಗರದ ಟಮಕ ಬಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಸೆಹಗಲ್ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈತ ಉತ್ಪಾದಕ ಸಂಸ್ಥೆಯ ಪ್ರತಿನಿಧಿಗಳು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande