ಬೀದರ್, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಇಂದು ಬೀದರ್ ದಕ್ಷಿಣ ಮತಕ್ಷೇತ್ರದ ಕಾಶೆಂಪೂರ್ ಮತ್ತು ಬುಧೇರಾ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳಿಗೆ ಈಗಾಗಲೇ ನಡೆಸಿರುವ ಸಮೀಕ್ಷೆಯ ಜೊತೆಗೆ ಮತ್ತೆ ಸುರಿದ ಮಳೆಯಿಂದಾದ ಹಾನಿಯನ್ನು ತಕ್ಷಣವೇ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿ ಸಂಭವಿಸಿರುವುದರಿಂದ, ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa