ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ಉತ್ಸವ 2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ಕಲ್ಯಾಣ ಕರ್ನಾಟಕದ ಹೋರಾಟಗಾರರ ತ್ಯಾಗವನ್ನು ನಾವು ಎಂದಿಗೂ ಮರೆಯ ಬಾರದು. 371ಜೆ ಅಡಿಯಲ್ಲಿ ಈ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದ್ದೇವೆ” ಎಂದರು.
2013ರಿಂದ ಇಲ್ಲಿವರೆಗೆ 84,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 24,780 ಕೋಟಿ ರೂ. ಅನುದಾನದಲ್ಲಿ 14,000 ಕೋಟಿ ರೂ. ವೆಚ್ಚವಾಗಿದೆ. ಈ ಸಾಲಿಗೆ 5,000 ಕೋಟಿ ರೂ. ಕೆಕೆಆರ್‌ಡಿಬಿಗೆ ನೀಡಲಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಮೊತ್ತ ಮೀಸಲಾಗಿದೆ ಎಂದು ಅವರು ಹೇಳಿದರು.
“ಕೃಷ್ಣಾ ಮೇಲ್ದಂಡೆ 3ನೇ ಹಂತದಿಂದ 15 ಲಕ್ಷ ಎಕರೆಗಳಿಗೆ ನೀರಾವರಿ ಒದಗಿಸಲಾಗುತ್ತಿದೆ. ಕಲಬುರಗಿಯನ್ನು ಆರೋಗ್ಯ ಮತ್ತು ಕ್ರೀಡಾ ಕೇಂದ್ರವನ್ನಾಗಿ, ರಾಯಚೂರನ್ನು ಏಮ್ಸ್ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ನೇರ ನೆರವು ತಲುಪುತ್ತಿದೆ” ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa